ಹೃದಯಾಘಾತ - ರಿಪ್ಪನ್‌ಪೇಟೆ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ, ಕನ್ನಡಪರ ಹೋರಾಟಗಾರ ವಿನಾಯಕ ಶೆಟ್ಟಿ ನಿಧನ
ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಭಗತ್‌ಸಿಂಗ್‌ನಗರದ ನಿವಾಸಿ ಕನ್ನಡಪರ ಹೋರಾಟಗಾರ, ಸಮಾಜಸೇವಕ ಹಾಗೂ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದ ವಿನಾಯಕ ಶೆಟ್ಟಿಯವರು ಹೃದಯಾಘಾತದಿಂದಾಗಿ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 26 ವರ್ಷ ವಯಸ್ಸಾಗಿತ್ತು.
ಭಾನುವಾರ ಬೆಳಗಿನ ಜಾವ ಎದೆ ನೋವು ಕಾಣಿಸಿಕೊಂಡಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗಲೇ ಹೃದಯಾಘಾತದಿಂದ ಮರಣ ಹೊಂದಿದ್ದಾರೆ. ಮೃತರು ತಂದೆ ತಾಯಿ, ಸಹೋದರ, ಸಹೋದರಿ, ಕುಟುಂಬಸ್ಥರು ಹಾಗೂ ಅಪಾರ ಸಂಖ್ಯೆಯ ಸ್ನೇಹಿತರನ್ನು ಅಗಲಿದ್ದಾರೆ. ಕನ್ನಡಪರ ಸಂಘಟನೆಯ ಕಾರ್ಯಕ್ರಮಗಳು ಹಾಗೂ ಸಮಾಜಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಇವರ ನಿಧನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು, ಕಲಗೋಡು ರತ್ನಾಕರ, ಬಂಡಿ ರಾಮಚಂದ್ರಪ್ಪ, ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ, ಮೆಣಸೆ ಆನಂದ, ಆಸಿಫ್ ಬಾಷಾ ಸಾಬ್, ಬಿಎಸ್ಎನ್‌ಎಲ್ ಶ್ರೀಧರ್, ಫ್ಯಾನ್ಸಿ ರಮೇಶ್, ಕೆರೆಹಳ್ಳಿ ರವಿ, ಆರ್.ಡಿ.ಶೀಲಾ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ