ಹೊಸನಗರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಸ್ವಚ್ಛತಾ ಕಾರ್ಯಕ್ರಮ
ಹೊಸನಗರ : ಹೊಸನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಹಾಗೂ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಆವರಣದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಹಿ ಸೇವಾ ಅಭಿಯಾನದಡಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.
ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆಬಿ ಮೋಹನ್ ಕುಮಾರ್, ನಿರ್ಗಮಿತ ಎಸಿಎಫ್ ಆಗಿ ಕರ್ತವ್ಯ ನಿರ್ವಹಿಸಿದ ಶ್ರೀಧರ್, ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಹಾಗೂ ಇತರೆ ಸ್ವಚ್ಛತಾ ಹಿ ಸೇವಾ ಅಭಿಯಾನದಡಿ ಸ್ವಚ್ಛತಾ ಕಾರ್ಯನಿರ್ವಹಿಸಿದರು.
ನಂತರ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದ ನೂತನ ಎಸಿಎಫ್ ಮೋಹನ್ ಕುಮಾರ್‌ರವರು, ಸ್ವಚ್ಛತೆ ನಮ್ಮ ಮನೆ ಮನ ಕಾಂಪೋಂಡ್‌ಗಳಿಗೆ ಅಷ್ಟೇ ಸೀಮಿತವಲ್ಲ. ನಮ್ಮ ಪರಿಸರ ಶುಚಿಯಾಗಿಟ್ಟುಕೊಳ್ಳುವುದು ಎಲ್ಲರ ಜವಾಬ್ದಾರಿ. ಸ್ವಚ್ಛತಾ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಂಡು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ, ಸಂರಕ್ಷಿಸುವ ಕಾರ್ಯದಲ್ಲಿ ಕೈ ಜೋಡಿಸುವಂತೆಕರೆ ನೀಡಿದರು.
ನಿರ್ಗಮಿತ ಎಸಿಎಫ್ ಶ್ರೀಧರ್, ವಲಯ ಅರಣ್ಯ ಅಧಿಕಾರಿ ರಾಘವೇಂದ್ರರವರು ಮಾತನಾಡಿ ಸ್ವಚ್ಛತಾ ಹೀ ಸೇವಾ ಅಭಿಯಾನ ನಿರಂತರವಾಗಿ ನಡೆಯುವಲ್ಲಿ ಎಲ್ಲರ ಸಹಕಾರ ಬಯಸಿದರು.
ಕಾಮೆಂಟ್‌ಗಳಿಲ್ಲ