Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

Hosanagara - ಹೊಸನಗರ ಶ್ರೀ ಧರ್ಮಸ್ಥಳ ಸಂಘದ ಆಶ್ರಯದಲ್ಲಿ ಪಾನಮುಕ್ತರ ಬೃಹತ್ ಜನಜಾಗೃತಿ ಜಾಥಾ - ನವ ಜೀವನ ಸಮಿತಿ ಸದಸ್ಯರಿಗೆ ಪುರಸ್ಕಾರ

ಹೊಸನಗರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಜಿಲ್ಲಾ ಜನಜಾಗೃತಿ ವೇದಿಕೆ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ನವ ಜೀವನ ಸಮಿತಿ ಹೊಸನಗರ ಇವರ ಸಂಯುಕ್ರಾಆಶ್ರಯದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ನವ ಜೀವನ ಸಮಿತಿ ಸದಸ್ಯರಿಗೆ ಪುರಸ್ಕಾರ, ಬೃಹತ್ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಎಂ.ಎಸ್. ಸಂತೋಷ್ ಹಾಗೂ ಪ್ರಧಾನ ವ್ಯವಹಾರ ನ್ಯಾಯಾಧೀಶ ಕೆ. ರವಿಕುಮಾರ್‌‌ರವರು ಉದ್ಘಾಟಿಸಿ ಚಾಲನೆ ನೀಡಿದರು.

ಡೊಳ್ಳು ಕುಣಿತ, ಕೋಲಾಟ, ಚಂಡೇವಾದನ ಸೇರಿದಂತೆ ವಿವಿಧ ಸಾಂಸ್ಕೃತಿಕ ಪ್ರಾಕಾರಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದ ಕಾರ್ಯಕರ್ತರು, ತಾಲ್ಲೂಕು ಕಚೇರಿಗೆ ತೆರಳಿ ತಮ್ಮ ಮನವಿ ಸಲ್ಲಿಸಿದ ನಂತರ ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ನಾರಾಯಣ ಕಾಮತ್‌‌ರವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಸಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಹರು ಗಂಗಾಧರಯ್ಯ ವಿಶೇಷ ಉಪನ್ಯಾಸ ನೀಡಿ, ಸುಖ ಸಂಸಾರಕ್ಕೆ ಸುಖೀ ಜೀವನಕ್ಕೆ ಪಾನ ಮುಕ್ತರಾಗುವಂತೆ ಕರೆ ನೀಡಿದರಲ್ಲದೇ, ಧರ್ಮಸ್ಥಳದ ಪರಮಪೂಜ್ಯ ವೀರೇಂದ್ರ ಹೆಗಡೆ ದಂಪತಿಗಳ ಮಾರ್ಗದರ್ಶನದಲ್ಲಿ ನಡೆಸಲ್ಪಡುತ್ತಿರುವ ಸಮಾಜಮುಖಿ ಕಾರ್ಯ ನಿರಂತರವಾಗಿರುವಂತೆ ಭಗವಂತನಲ್ಲಿ ಪ್ರಾರ್ಥಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಚಂದ್ರಶೇಖರ್ ಜೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎನ್.ಆರ್. ದೇವಾನಂದ, ಕೊಡಚಾದ್ರಿ ಜೆಸಿಐ ಅಧ್ಯಕ್ಷ ವಕೀಲ ಮೋಹನ್ ಜಿ. ಶೆಟ್ಟಿ, ಮಹಿಳಾ ಸಿರಿಗನ್ನಡ ವೇದಿಕೆ ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ನಾಗರತ್ನ ದೇವರಾಜ್, ಜಿ. ಹೆಚ್. ದೇವೇಂದ್ರ, ನಾಗರಾಜ್ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ರಮ್ಯಾ ಮತ್ತು ನಿಶ್ಮಿತಾ ಪ್ರಾರ್ಥಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಕೆ. ಬೇಬಿ ಸ್ವಾಗತ ಕೋರಿದರು. ನಾಗೇಶ್ ಕಾರ್ಯಕ್ರಮ ನಿರೂಪಿಸಿದರೆ, ಸುಭಾಷ್ ವಂದಿಸಿದರು.

VIDEO - ಹೊಸನಗರ ಧರ್ಮಸ್ಥಳ ಸಂಘದ ಶಾಖೆಯಿಂದ ಸುಜ್ಞಾನ ನಿಧಿ ಹಾಗೂ ಸುರಕ್ಷಾ ನಿಧಿ ಪಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ


ಕಾಮೆಂಟ್‌ಗಳಿಲ್ಲ