ಸಾಗರದಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗುದ್ದಿದ ಬೈಕ್ - ಮೂವರಿಗೆ ಗಾಯ
ಸಾಗರ : ಇಲ್ಲಿನ ಗಾಂಧಿನಗರ ಸರ್ಕಲ್ಲಿನಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಬೈಕ್ವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ.
ನಗರದ ಗಾಂಧಿನಗರ ಸರ್ಕಲ್ಲಿನಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿ(KA-17, F-1766)ಗೆ ವೇಗದಿಂದ ಬಂದ ಬೈಕ್ (KA-27 H-2161)ವೊಂದು ಗುದ್ದಿದ್ದು, ಗುದ್ದಿದ ರಭಸಕ್ಕೆ ಬೈಕ್ನ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೂವರಿಗೆ ಗಾಯವಾಗಿದೆ ಎನ್ನುವ ಮಾಹಿತಿ ಇದೆ. ಘಟನೆ ನಡೆದ ತಕ್ಷಣ ಸಾಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೈಕ್ ತೆರವುಗೊಳಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಮೆಂಟ್‌ಗಳಿಲ್ಲ