Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ವಿಧಿವಶ

ಚಿಕ್ಕಮಗಳೂರು : ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ, ಇಂದಿರಾಗಾಂಧಿಗಾಗಿ ಸ್ವಕ್ಷೇತ್ರವನ್ನೇ ಬಿಟ್ಟು ಕೊಟ್ಟು ಅವರಿಗೆ ರಾಜಕೀಯ ಪುನರ್‌‌ಜನ್ಮ ನೀಡಲು ಕಾರಣವಾಗಿದ್ದ ಡಿ.ಬಿ. ಚಂದ್ರೇಗೌಡರು (87 ವರ್ಷ) ಸೋಮವಾರ ಮಧ್ಯರಾತ್ರಿ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಚಂದ್ರೇಗೌಡ ಅವರು ಪತ್ನಿ ಪೂರ್ಣಿಮಾ ಮತ್ತು ನಾಲ್ವರು ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ತೀರ್ಥಹಳ್ಳಿ ನಂಟು : 1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಚಂದ್ರೇಗೌಡರು, ಇಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು. ಜೊತೆಗೆ ಸರ್ಕಾರಿ ಹೈಸ್ಕೂಲ್‌ಗಳು ತೀರ್ಥಹಳ್ಳಿ ತಾಲ್ಲೂಕಿಗೆ ಬರುವಲ್ಲಿ ಶ್ರಮಿಸಿದ್ದರು. 1987ರಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡನೇ ಬಾರಿ ಕೂಡಾ ಗೆಲುವು ಸಾಧಿಸಿದ್ದರು.

2014ರಿಂದ ಸಕ್ರಿಯ ರಾಜಕಾರಣದಿಂದ ದೂರ ಸರಿದಿದ್ದ ಚಂದ್ರೇಗೌಡರು, ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.


ಕಾಮೆಂಟ್‌ಗಳಿಲ್ಲ