Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಮಂಗನ ಕಾಯಿಲೆ ಬಗ್ಗೆ ತುರ್ತು ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಮನ್ವಯ ಸಮಿತಿ ಸಭೆಯಲ್ಲಿ ತಹಶೀಲ್ದಾರ್ ರಶ್ಮಿ ಸಲಹೆ

ಹೊಸನಗರ : ಮಲೆನಾಡನ್ನು ತಲ್ಲಣಗೊಳಿಸಿರುವ ಮಂಗನ ಕಾಯಿಲೆ ಈಗ ಹರಡುವ ಸಮಯ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಅರಣ್ಯ ಇಲಾಖೆಯವರು ತುರ್ತು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್‌‌ ಶ್ರೀಮತಿ ರಶ್ಮಿ ಹಾಲೇಶ್ ಇಂದು ತಾಲ್ಲೂಕು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಸಲಹೆ ನೀಡಿದರು.

23-24 ನೇ ಸಾಲಿನ ಇಲಾಖೆಗಳ, ಅಂತರ್ ಇಲಾಖೆಗಳ ಸಮನ್ವಯ ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಾದ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ, ತಾಯಿ ಮರಣ ಹಾಗೂ ಶಿಶು ಮರಣ ಸೇವಾ ಸೌಲಭ್ಯದ ಬಗ್ಗೆ, ಅತಿಸಾರ ಭೇದಿ ನಿಯಂತ್ರಣದ ಬಗ್ಗೆ, ನ್ಯುಮೋನಿಯಾ ತಡೆಗಟ್ಟುವ ಬಗ್ಗೆ ಹಾಗೂ ಪುರುಷ ಸಂತಾನ ನಿಯಂತ್ರಣ ಬಗ್ಗೆ ಸಮಿತಿ ಸಭೆಯಲ್ಲಿ ಮಾಹಿತಿ ನೀಡಲಾಯಿತು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನರೇಂದ್ರ ಕುಮಾರ್, ತಾಲ್ಲೂಕು ಕುಟುಂಬ ಕಲ್ಯಾಣ ಅಧಿಕಾರಿ ಡಾ, ಸುರೇಶ್ ಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸಾಂಕ್ರಾಮಿಕ ರೋಗಗಳ ತಡೆ, ಮುಂಜಾಗ್ರತಾ ಕ್ರಮ ಹಾಗೂ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಸೂಕ್ತ ಮಾಹಿತಿ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕಚೇರಿಯ ಅಧಿಕಾರಿಗಳಾದ ಹೇಮಂತ್ ರಾಜ್, ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆಯ ಶ್ರೀಮತಿ ವೀರಮ್ಮ, ಪಶುಸಂಗೋಪನಾ ಇಲಾಖೆಯ ಅನಿತಾ, ಅರಣ್ಯ ಇಲಾಖೆಯ ಯುವರಾಜ್, ಸಮಾಜ ಕಲ್ಯಾಣ ಇಲಾಖೆಯ ಸುನೀಲ್ ರಾಜ್, ತಾಲ್ಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ ಹಾಗೂ ಆರ್ ಬಿ ಕೆ ಎಸ್ ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಆರ್. ಕರಿಬಸಮ್ಮ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಮೇಶ್ ವಂದಿಸಿದರು.


ಕಾಮೆಂಟ್‌ಗಳಿಲ್ಲ