ಜಿಲ್ಲಾ ಮಟ್ಟದ ಪ್ರೌಢಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟ - ರಾಜ್ಯಮಟ್ಟಕ್ಕೆ ಜಿಗಿದ ಹೊಸನಗರ ಮಲೆನಾಡು ಪ್ರೌಢಶಾಲೆ ವಿದ್ಯಾರ್ಥಿನಿ ಹೀಲುಗೋಡಿನ ಎನ್. ಸುಷ್ಮಾ
ಹೊಸನಗರ : ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟದ ಎತ್ತರ ಜಿಗಿತ ವಿಭಾಗದಲ್ಲಿ ಹೊಸನಗರದ ಮಲೆನಾಡು ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಹೀಲುಗೋಡಿನ ಎನ್ ಸುಷ್ಮಾ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಹೊಸನಗರ ತಾಲೂಕು ಹರಿದ್ರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೀಲಗೋಡಿನ ನಾಗಪ್ಪ ಮತ್ತು ನಳಿನಿರವರ ಪುತ್ರಿಯಾದ ಎನ್. ಸುಷ್ಮಾ ಗ್ರಾಮೀಣ ಕ್ರೀಡಾ ಪ್ರತಿಭೆಯಾಗಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಸಾಧನೆ ಮಾಡಿದ ಸುಷ್ಮಾಳನ್ನು ಮಲೆನಾಡು ಪ್ರೌಢಶಾಲಾ ಆಡಳಿತ ಮಂಡಳಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಕನ್ನಡ ಸಂಘದವರು ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳಿಲ್ಲ