Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಗವಟೂರಿನಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ, ಎಂಟು ಮಂದಿ ವಿರುದ್ಧ ಪ್ರಕರಣ ದಾಖಲು

ರಿಪ್ಪನ್‌‌ಪೇಟೆ : ಪಟ್ಟಣಕ್ಕೆ ಹೊಂದಿಕೊಂಡಂತಿರುವ ಗವಟೂರು ಗ್ರಾಮದ ಕಟ್ಟಡ ಒಂದರ ಹಿಂಭಾಗದಲ್ಲಿ ಹಣವನ್ನು ಪಣಕ್ಕಿಟ್ಟು ಕಾನೂನು ಬಾಹಿರವಾಗಿ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ರಿಪ್ಪನ್‌ಪೇಟೆ ಪೊಲೀಸರು, 14,700 ರೂಪಾಯಿ ನಗದು ಹಾಗೂ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಅಂದರ್ ಬಾಹರ್ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿ, 14700 ರೂ ನಗದು, 52 ಇಸ್ಪೀಟ್ ಎಲೆ, ಚಾರ್ಜರ್ ಲೈಟ್, ಒಂದು ಟಾರ್ಪಲ್ ಸಹಿತ ಅಂದರ್‌ಬಾಹರ್‌ ಆಡುತ್ತಿದ್ದ ಉಜ್ಜಪ್ಪ ಗೌಡ, ವಿಜಯಕುಮಾರ್, ಚಂದ್ರಚಾರ್ಯ, ರಮೇಶ್, ಮಂಜುನಾಥ್, ನವೀನ್ ಮತ್ತು ಸೋಮಶೇಖರ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ರಿಪ್ಪನ್‌‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ, ಡಿ ವೈ ಎಸ್ ಪಿ ಗಜಾನನ ವಾಮನ ಸುತಾರ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್. ಹೆಬ್ಬಾಳ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ರಿಪ್ಪನ್‌‌ಪೇಟೆ ಠಾಣೆಯ ಪಿಎಸ್ಐ ಪ್ರವೀಣ್ ಎಸ್. ಪಿ ಮತ್ತು ಸಿಬ್ಬಂದಿಗಳಾದ ಉಮೇಶ್, ಸಂತೋಷ್ ಕೊರವರ್, ಶಿವಕುಮಾರ್ ಹಾಗೂ ಇನ್ನಿತರರಿದ್ದರು.


ಕಾಮೆಂಟ್‌ಗಳಿಲ್ಲ