Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಶಿ.ಜು. ಪಾಶ ನೇಮಕ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶಿ.ಜು.ಪಾಶ (ಜುಬೇರ್ ಪಾಶ) ರವರನ್ನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಪಾಶ ಅವರ ನೇಮಕದಿಂದಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ಸಿಗೆ ಹೊಸ ಹುರುಪು ಬಂದಂತಾಗಿದೆ. ತಮ್ಮನ್ನು ಈ ಹುದ್ದೆಗೆ ನೇಮಕ ಮಾಡಿದ ಜಿಲ್ಲಾ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಜಿಲ್ಲಾ ಮಂತ್ರಿಗಳಾದ ಮಧು ಬಂಗಾರಪ್ಪ,ಕಾಂಗ್ರೆಸ್ ವಕ್ತಾರರಾದ ಆಯನೂರು ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್.ಎಂ. ಮಂಜುನಾಥ ಗೌಡ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕಲೀಂ ಪಾಷ, ಸುಧೀರ್ ಕುಮಾರ್ ಹಾಗೂ ಪಕ್ಷದ ಎಲ್ಲಾ ಹಿರಿ ಕಿರಿಯ ಮುಖಂಡರಿಗೆ ಶಿ.ಜು.ಪಾಶ ಈ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳಿಲ್ಲ