Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನ ಸೌಲಭ್ಯ ಕುರಿತು ಒಂದು ದಿನದ ಕಾರ್ಯಾಗಾರ

ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಹಾಗೂ ಇನ್ನಿತರ ವಿದ್ಯಾರ್ಥಿಗಳಿಗಾಗಿ ಸರ್ಕಾರದಿಂದ ದೊರಕುವ ವಿದ್ಯಾರ್ಥಿ ವೇತನ ಹಾಗೂ ಇನ್ನಿತರ ಸೌಲಭ್ಯಗಳ ಕುರಿತು ಒಂದು ದಿನದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಕಾಲೇಜಿನ  ಕುವೆಂಪು ಸಭಾಂಗಣದಲ್ಲಿ ನಡೆದ ಈ ಕಾರ್ಯಾಗಾರ ಕಾಲೇಜಿನ ಪ್ರಾಚಾರ್ಯ ಡಾ ಕೆ. ಉಮೇಶ್ ಅಧ್ಯಕ್ಷತೆಯಲ್ಲಿ ನೆರವೇರಿತು.

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವಾದ ಇಂದು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಾಗಾರದಕ್ಕೆ ಚಾಲನೆ ನೀಡಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಗೀತಾ, ಹಿಂದುಳಿದ ವರ್ಗದ ಇಲಾಖೆಯ ಕಲ್ಯಾಣ ಅಧಿಕಾರಿ ಹೆಚ್. ಆರ್. ರಾಘವೇಂದ್ರ, ಕಾರ್ಮಿಕ ಕಲ್ಯಾಣ ಇಲಾಖೆಯ ಪ್ರಮೋದ್ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರದಲ್ಲಿ ಭಾಗವಹಿಸಿ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರಕುವ ವಿದ್ಯಾರ್ಥಿ ವೇತನ ಹಾಗೂ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಕಾರ್ಯಾಗಾರದಲ್ಲಿ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಎನ್. ಪ್ರದೀಪ್ ಕುಮಾರ್, ದೊಡ್ಡಯ್ಯ, ಶ್ರೀಮತಿ ಬಿ. ಎನ್. ಶಾಲಿನಿ ಮುಖ್ಯ ಅತಿಥಿಗಳಿಗೆ ಪಾಲ್ಗೊಂಡಿದ್ದರು.

ಕುಮಾರಿ ನಿಕಿತಾ ಪ್ರಾರ್ಥಿಸಿದರು. ಶ್ರೀಮತಿ ಪ್ರತಿಮಾ ಸ್ವಾಗತಿಸಿದರು. ಕಾರ್ಯಕ್ರಮ ಅಧಿಕಾರಿ ರವಿಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕುಮಾರಿ ಸಂಗೀತ ಕಾರ್ಯಕ್ರಮ ನಿರೂಪಿಸಿದರು. ದೊಡ್ಡಯ್ಯ ವಂದಿಸಿದರು.

ಕಾಮೆಂಟ್‌ಗಳಿಲ್ಲ