ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗ ಘಟಕದಿಂದ 2022-2023 ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಶಿವಮೊಗ್ಗ, ಕರ್ನಾಟಕ ಹಸೆ ಚಿತ್ತಾರ ಪರಿಷತ್ತು (ರಿ) ಮತ್ತು ಮಕ್ಕಳ ಮಂದಾರ ಬಳಗದ ಸಹಯೋಗದೊಂದಿಗೆ 2022-2023 ನೇ ಸಾಲಿನ ವಿವಿಧ ಐದು ವಿಭಾಗಗಳ ದತ್ತಿ ಪ್ರಶಸ್ತಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ದತ್ತಿ ಪ್ರಶಸ್ತಿಗಳ ವಿವರ ಈ ಕೆಳಕಂಡಂತಿದೆ.
1. ಡಾ.ಕೊಡಕ್ಕಲ್ ಶಿವಪ್ರಸಾದ್ ದತ್ತಿ ಪುರಸ್ಕಾರ
ರಾಜ್ಯದ ಅಂಗವಿಕಲ ಮಕ್ಕಳ ಶಿಕ್ಷಣ , ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದವರಿಗೆ ಈ ಪುರಸ್ಕಾರ ಮೀಸಲಾಗಿದೆ. ಸಂಬಂಧಿಸಿದವರು ತಮ್ಮ ಸೇವಾ ವಿವರಗಳನ್ನು ಪಿಡಿಎಫ್ ಕಳುಹಿಸಲು ಕೋರಿದೆ.
2. ನೇಕಾರ ಪ್ರಕಾಶನ ದತ್ತಿ ಪುರಸ್ಕಾರ
ಈ ಪುರಸ್ಕಾರವು 2022 - 2023ನೇ ಸಾಲಿನಲ್ಲಿ ಪ್ರಕಟವಾದ ಜಾನಪದ ಸಾಹಿತ್ಯ ವಿಭಾಗದಲ್ಲಿ ಪ್ರಕಟಿಸಲ್ಪಟ್ಟ ಉತ್ತಮ ಕೃತಿಗೆ ಮೀಸಲಾಗಿರುತ್ತದೆ.
3. ಶ್ರೀಮತಿ ಕುಮುದಾ ಸುಶೀಲಪ್ಪ ದತ್ತಿ ಪುರಸ್ಕಾರ
ರಾಜ್ಯದ ಸಂಶೋಧಕರು, ಸಂಶೋಧನಾ ಸಾಹಿತ್ಯ, ಬುಡಕಟ್ಟು ಮಕ್ಕಳ ಶ್ರೇಯೋಭಿವೃದ್ಧಿಗೆ, ಬುಡಕಟ್ಟು ಕಲೆ, ಸಾಹಿತ್ಯ ಪರಂಪರೆಯ ಪುನರುಜ್ಜೀವನಕ್ಕೆ ಶ್ರಮಿಸಿದವರಿಗೆ ಈ ಪುರಸ್ಕಾರ ಮೀಸಲು. ತಮ್ಮ ಸೇವೆಯ ಸಂಬಂಧಿತ ದಾಖಲೆಗಳನ್ನು ಪಿಡಿಎಫ್‌ನಲ್ಲಿ ಇ-ಮೇಲ್ ಮಾಡಬಹುದು.
4. "ಮಕ್ಕಳ ಮಂದಾರ ರಾಜ್ಯ ಪ್ರಶಸ್ತಿ" ಪುರಸ್ಕಾರ
2022-23 ನೇ ಸಾಲಿನಲ್ಲಿ ಪ್ರಕಟವಾದ ಯಾವುದೇ ರೀತಿಯ ಮಕ್ಕಳ ಸಾಹಿತ್ಯ ಕೃತಿಗಳಿಗೆ ಈ ಪ್ರಶಸ್ತಿ ಮೀಸಲು. ಈ ಪ್ರಶಸ್ತಿ ಆಯ್ಕೆಗೆ ಬಂದ ಮಕ್ಕಳ ಸಾಹಿತ್ಯದ ವೈವಿಧ್ಯಮಯ ಕೃತಿಗಳ ಸಂಖ್ಯೆಯನ್ನು ಮತ್ತು ಗುಣಮಟ್ಟವನ್ನು ಆಧರಿಸಿ ಈ ಪ್ರಶಸ್ತಿಯ ಪುರಸ್ಕೃತರ ಸಂಖ್ಯೆಗಳನ್ನು ಸಮಿತಿಯು ನಿರ್ಧರಿಸುತ್ತದೆ.
5. ಮಕ್ಕಳ ಮಂದಾರ ಗೌರವ ಪುರಸ್ಕಾರ
ಈ ಪುರಸ್ಕಾರ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಮಕ್ಕಳ ಸಾಹಿತ್ಯ, ಪ್ರಕಾಶನ, ಶಾಲಾ ಶೈಕ್ಷಣಿಕ ಸೇವೆಯಲ್ಲಿನ ಸೂಕ್ತ ವ್ಯಕ್ತಿಗಳಿಗೆ ಮಾತ್ರ ಆಗಿರುತ್ತದೆ.
ಮಕ್ಕಳ ಶಿಕ್ಷಣದಲ್ಲಿ ನಾವೀನ್ಯ ಪ್ರಯೋಗ ಮಾಡಿದ ಶಿಕ್ಷಕರು, ಮಕ್ಕಳ ಶಿಕ್ಷಣಕ್ಕೆ ಹಾಗೂ ಸರ್ಕಾರಿ ಶಾಲಾ ಸಬಲೀಕರಣಕ್ಕೆ ಶ್ರಮಿಸಿದವರು, ಮಕ್ಕಳ ಹಕ್ಕುಗಳ ಹೋರಾಟಗಾರರ ಜೀವಮಾನದ ಸಾಧನೆಗೆ ’ಮಕ್ಕಳ ಮಂದಾರ’ ಗೌರವ ಪುರಸ್ಕಾರ ಮೀಸಲಾಗಿದೆ.
ಅಂತಹ ಸಾಧಕರ ವಿವರಗಳನ್ನು ಸೂಕ್ತ ಲಗತ್ತುಗಳೊಂದಿಗೆ ಪಿಡಿಎಫ್ ಫೈಲ್ ಜೊತೆಗೆ ಯಾರಾದರೂ ನಾಮನಿರ್ದೇಶನ ಮಾಡಬಹುದು. ಅಥವಾ ಸ್ವತಃ ಅಭ್ಯರ್ಥಿಯೇ ಅರ್ಜಿ ಸಲ್ಲಿಸಬಹುದು.
ರಾಜ್ಯ ಪ್ರಶಸ್ತಿಗಳು ನಗದು ಪುರಸ್ಕಾರ, ಸನ್ಮಾನ ಪತ್ರವನ್ನು ಒಳಗೊಂಡಿರುತ್ತದೆ. ಗೌರವ ಪುರಸ್ಕಾರಗಳು ಸನ್ಮಾನ ಹಾಗೂ ಸನ್ಮಾನ ಪತ್ರ ಫಲಕ ಒಳಗೊಂಡಿರುತ್ತದೆ.
ಸಾಹಿತ್ಯ ಕೃತಿಗಳ ವಿಭಾಗಕ್ಕೆ ಅರ್ಜಿ ಸಲ್ಲಿಸುವವರು 2022-23 ನೇ ಸಾಲಿನ ಯಾವುದೇ ರೀತಿಯ ಮಕ್ಕಳ ಸಾಹಿತ್ಯ ಕೃತಿಗಳ ಮೂರು ಪ್ರತಿಗಳನ್ನು ಕಳುಹಿಸಬೇಕು. ಕೃತಿಗಳ ಮೇಲೆ ಯಾವುದೇ ಮಾಹಿತಿ, ಹೆಸರು ಬರೆಯುವ ಅಗತ್ಯವಿಲ್ಲ.
ಪ್ರಶಸ್ತಿ ಪುರಸ್ಕೃತರ ಸಂಖ್ಯೆಯನ್ನು ದತ್ತಿ ಪ್ರಾಯೋಜಕರು ನಿರ್ಧರಿಸುತ್ತಾರೆ. ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ತಮ್ಮ ನಾಮನಿರ್ದೇಶನ, ಪ್ರಸ್ತಾವನೆ ಕಳಿಸಲು ಕೊನೆಯ ದಿನ ಜನವರಿ 30. 2024.
ಸೂಕ್ತ ದಾಖಲೆಗಳೊಂದಿಗೆ ತಮ್ಮ ಸೇವೆಯ ವಿವರಗಳನ್ನು ಕಳಿಸಬೇಕಾದ ಈಮೇಲ್
Makkalamandara@Gmail.com.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ - 9980952630, ಕಾರ್ಯದರ್ಶಿಗಳು - ಕುಮುದಾ ಸುಶೀಲಪ್ಪ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ರವಿರಾಜ್ ಸಾಗರ್ (ರವಿಚಂದ್ರ), ಜಿಲ್ಲಾಧ್ಯಕ್ಷರು, ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗ. ತಾಳಗುಪ್ಪ. ತಾಳಗುಪ್ಪ-ಪೋಸ್ಟ್. ಸಾಗರ-ತಾಲ್ಲೂಕು, ಶಿವಮೊಗ್ಗ ಜಿಲ್ಲೆ - 577401, ದೂರವಾಣಿ ವಾಟ್ಸಾಪ್- 9980952630.
ಕಾಮೆಂಟ್‌ಗಳಿಲ್ಲ