Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದ ನಗರ ಪ್ರೌಢಶಾಲೆಯ ಅನನ್ಯ ಮತ್ತು ಸಾನಿಕ

ಹೊಸನಗರ : ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಯೋಜಿಸಿದ್ದ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಹೊಸನಗರ ತಾಲ್ಲೂಕಿನ ನಗರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ 10ನೇ ತರಗತಿಯ ಕುಮಾರಿ ಅನನ್ಯ ಎಸ್.ಕೆ, 9ನೇ ತರಗತಿಯ ಕುಮಾರಿ ಸಾನಿಕ.ಸಿ ಇವರು ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ 12,000 ರೂಪಾಯಿ ನಗದು ಬಹುಮಾನ, ಪಾರಿತೋಷಕವನ್ನು ಮುಡಿಗೇರಿಸಿಕೊಂಡು ತಾಲ್ಲೂಕಿಗೆ ಹೆಮ್ಮೆ ತಂದಿದ್ದಾರೆ.

ಶಾಲೆಯ ವಿಜ್ಞಾನ ಶಿಕ್ಷಕರಾದ ಶೇಖರನಾಯ್ಕ .ಆರ್ ಮತ್ತು ವೆಂಕಟೇಶ. ಜಿ ವೈದ್ಯ ಇವರ ಮಾರ್ಗದರ್ಶನದಲ್ಲಿ ಶಿವಮೊಗ್ಗದಲ್ಲಿ ನಡೆದಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದ ಈ ವಿದ್ಯಾರ್ಥಿಗಳು, ಮತ್ತೆ ರಾಜ್ಯ ಮಟ್ಟದಲ್ಲಿಯೂ ಸಹಾ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಶಾಲೆಯ, ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸಿರುತ್ತಾರೆ. 

ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು, ಸರ್ವ ಸದಸ್ಯರುಗಳು, ಮೂಡುಗೊಪ್ಪ-ನಗರ ಗ್ರಾಮ ಪಂಚಾಯತಿ, ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಶಾಲಾ ಅಭಿವೃದ್ಧಿ ಮತ್ತು ಮೇಲ್ತುಸ್ತುವಾರಿ ಸಮಿತಿ, ಮುಖ್ಯೋಪಾಧ್ಯಾಯರು ಮತ್ತು ಬೋಧಕ, ಬೋಧಕೇತರ ವೃಂದ, ಮುಖ್ಯೋಪಾಧ್ಯಾಯರು ಮತ್ತು ಬೋಧಕ ವರ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಲಿಗೇರಿ, ವಿದ್ಯಾರ್ಥಿಗಳು, ವಿದ್ಯಾರ್ಥಿ ಪೋಷಕರು, ಹಿರಿಯ ವಿದ್ಯಾರ್ಥಿಗಳ ಸಂಘ, ಚಿಕ್ಕಪೇಟೆ ಮತ್ತು ನೂಲಿಗೇರಿ ಗೆಳೆಯರ ಬಳಗ, ಚಿಕ್ಕಪೇಟೆ-ನಗರ ಮತ್ತು ಸುತ್ತಲ ಗ್ರಾಮಸ್ಥರು ವಿದ್ಯಾರ್ಥಿಗಳ ಗೆಲುವಿಗೆ ಅಭಿನಂದಿಸಿದ್ದಾರೆ.

ಕಾಮೆಂಟ್‌ಗಳಿಲ್ಲ