ಹೆದ್ದಾರಿಪುರ - ಮಾತೃಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಕ್ಯಾನ್ಸರ್ ಆರೋಗ್ಯ ತಪಾಸಣಾ ಶಿಬಿರ
ಹೊಸನಗರ: ಮಹಿಳೆಯರು ತಮ್ಮ ಅರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕು. ದೈಹಿಕ ಮತ್ತು ಮಾನಸಿಕವಾಗಿ ಅರೋಗ್ಯವಂತರಾಗಿರಬೇಕು. ಈ ಉದ್ದೇಶದಿಂದಲೇ ಮಾತೃಶ್ರೀ ಅಮ್ಮನವರು ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು ನಾವೆಲ್ಲರೂ ಇದನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ಜನ ಜಾಗೃತಿಯ ಸದಸ್ಯರಾದ ಶಶಿಕಲಾ ಅವರು ಹೇಳಿದರು.
ಹೆದ್ದಾರಿಪುರ ಕಾರ್ಯಕ್ಷೇತ್ರದ ಮಾತೃಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಆಯೋಜಿಸಲ್ಪಟ್ಟಿದ್ದ ಸೃಜನಶೀಲಾ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಕ್ಯಾನ್ಸರ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಸುಬ್ಬಯ್ಯ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಶ್ರೇಯಾಂಸರವರು, ಸ್ತನ ಕ್ಯಾನ್ಸರ್ ಮತ್ತು ಥೈರಾಡ್, ಗಂಟಲು ಕ್ಯಾನ್ಸರ್ ಬಗ್ಗೆ ವಿಡಿಯೋ ಮತ್ತು ಪಿಪಿಟಿ ಮೂಲಕ ಕ್ಯಾನ್ಸರ್ ಲಕ್ಷಣಗಳು ಮತ್ತು ಅದನ್ನು ಹೇಗೆ ಕಂಡು ಹಿಡಿಯಬಹುದು ಎಂದು ಸರಳವಾಗಿ ಎಲ್ಲರಿಗೂ ಅರ್ಥವಾಗುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಮೂರು ತಿಂಗಳ ಕಾಲ ನಡೆದ ಹೊಲಿಗೆ ತರಬೇತಿ ಶಿಬಿರದಲ್ಲಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ, ಒಕ್ಕೂಟದ ಅಧ್ಯಕ್ಷರು, ಜಿಲ್ಲಾ ಬೌದ್ಧಿಕ ಪ್ರಮುಖರಾದ ವಸಂತ, ಮೇಲ್ವಿಚಾರಕರು, ಜ್ಞಾನ ವಿಕಾಸ ಸಮನ್ವಯಾಧಿಕಾರಿ, ಸೇವಾಪ್ರತಿನಿಧಿಗಳು ಮತ್ತು ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ