Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

’ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ’ದ ಅಧ್ಯಕ್ಷರಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ನೇಮಕ

ಹೊಸನಗರ : ಕೊನೆಗೂ ರಾಜ್ಯ ಸರ್ಕಾರದಿಂದ ನಿಗಮ, ಮಂಡಳಿಯ ಪಟ್ಟಿ ಬಿಡುಗಡೆಗೊಂಡಿದ್ದು ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ ’ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ’ದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಒಟ್ಟು ಮೂವತ್ತೈದು ಶಾಸಕರನ್ನು ನಿಗಮ, ಮಂಡಳಿಗೆ ನೇಮಕ ಮಾಡಲಾಗಿದ್ದು, ಬೇಳೂರು ಗೋಪಾಲಕೃಷ್ಣ ಅವರಿಗೆ ದೊರೆತಿರುವ ಹುದ್ದೆ ಮಹತ್ತರವಾದುದಾಗಿದೆ. 

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು ಅವರ ಈ ಬಾರಿಯ ಗೆಲುವು ಶಿವಮೊಗ್ಗ ಜಿಲ್ಲೆಯ ರಾಜಕೀಯದಲ್ಲಿ ಸಂಚಲನವನ್ನೇ ಉಂಟು ಮಾಡಿತ್ತು. ಶಾಸಕರಾಗಿ ಆಯ್ಕೆಯಾದ ನಂತರ ಜನರೊಂದಿಗೆ ಮೊದಲಿನ ಹಾಗೆಯೇ ಸಂಪರ್ಕದಲ್ಲಿರುವ ಗೋಪಾಲಕೃಷ್ಣ ಬೇಳೂರು ಅವರು ಖಡಕ್‌ ಮಾತುಗಳಿಂದಲೂ ಸಾಕಷ್ಟು ಸುದ್ದಿಯಲ್ಲಿದ್ದರು. 


ಪಕ್ಷ ಯಾವುದೇ ಹುದ್ದೆ ಕೊಟ್ಟರೂ ನಾನು ಸ್ವೀಕರಿಸುತ್ತೇನೆ ಎಂದು ಪಕ್ಷ ನಿಷ್ಠೆಯನ್ನು ತೋರಿಸುತ್ತಿದ್ದ ಬೇಳೂರು ಅವರಿಗೆ ’ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ’ದ ಅಧ್ಯಕ್ಷ ಹುದ್ದೆ ದೊರೆತಿರುವುದು ಅವರ ಅಭಿಮಾನಿಗಳಿಗೆ, ಪಕ್ಷದ ಕಾರ್ಯಕರ್ತರಿಗೆ ಸಂತಸವನ್ನು ತಂದಿದೆ.

ಕಾಮೆಂಟ್‌ಗಳಿಲ್ಲ