ನಾಳೆ ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ
ಹೊಸನಗರ : ಹೊಸನಗರ ಪಟ್ಟಣ ಹಾಗೂ ಸಾಗರ ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಪುರ ಮಠ, ಮೇಲಿನಬೆಸಿಗೆ ಹಾಗೂ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಆಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಜನವರಿ 9ರ ಮಂಗಳವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಹಾಗೂ 33 ಕೆ ವಿ ಸಾಗರ ಹೊಸನಗರ ಮಾರ್ಗದ ನಿರ್ವಹಣೆ ಸಂಬಂಧ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಉಪವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ಕಾಮೆಂಟ್‌ಗಳಿಲ್ಲ