Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ

ಹೊಸನಗರ : ಇಲ್ಲಿನ ಗೇರುಪುರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಿನ್ನೆ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ್‌ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಹೊಸನಗರದ ಹಿರಿಯ ವ್ಯವಹಾರ ನ್ಯಾಯಾಧೀಶರು ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಸಂತೋಷ್‌ ಎಂ.ಎಸ್‌ ಅವರು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ಸಮಾನತೆಯ ಬಗ್ಗೆ ವಿವರಿಸಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಹೊಸನಗರದ ಪ್ರಧಾನ ವ್ಯವಹಾರ ನ್ಯಾಯಾಧೀಶರು, ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ರವಿಕುಮಾರ್ ಕೆ. ಅವರು ಮಾತನಾಡಿ, ಸಂವಿಧಾನದ ಹಕ್ಕುಗಳಲ್ಲಿ ಸಾಮಾಜಿಕ ನ್ಯಾಯದ ಕುರಿತು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಚಂದ್ರಶೇಖರ್‌ ಎಂ.ಪಿ, ಅವರು, ಬಸವಣ್ಣನವರ ಕಾಲದ ದಾಸೋಹದಿಂದ ಹಿಡಿದು ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ತ್ರಿವಿಧ ದಾಸೋಹದವರೆಗೂ ಇರುವ ಸಾಮಾಜಿಕ ನ್ಯಾಯ ಮತ್ತು ಸಮಾನತೆ, ಸಾಮಾಜಿಕ ಕಳಕಳಿಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.

ಶಾಲೆಯ ಶಿಕ್ಷಕರಾದ ಉಮೇಶ್‌ ನಾಯ್ಕ ಸ್ವಾಗತಿಸಿದರೆ, ಶ್ರವಣಕುಮಾರ್ ಹೆಚ್‌ ವಂದಿಸಿದರು. ತಿರುಕೇಶ ಹೆಚ್‌ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. 

ಕಾಮೆಂಟ್‌ಗಳಿಲ್ಲ