Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಬಟ್ಟೆಮಲ್ಲಪ್ಪ - ಜಲಜೀವನ್ ಮಿಷನ್‌ ಯೋಜನೆಯ ಕುಡಿಯುವ ನೀರಿನ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ : ತಾಲ್ಲೂಕಿನ ಹರಿದ್ರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟ್ಟೆಮಲ್ಲಪ್ಪದಲ್ಲಿ ಇಂದು ಜಲಜೀವನ್ ಮಿಷನ್‌ ಯೋಜನೆಯಡಿಯಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ನಮ್ಮ ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಈಡೇರಿಸುವ ಮೂಲಕ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಿದೆ ಎಂದು ಹೇಳಿದರು.

ಆರಂಭದಲ್ಲಿ ರಾಜಕೀಯ ವಿರೋಧಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಪಹಾಸ್ಯ ಮಾಡಿದ್ದರು. ಆದರೆ ರಾಜ್ಯ ಸರ್ಕಾರ ಈಗಾಗಲೇ 5 ಗ್ಯಾರಂಟಿಗಳನ್ನು ಜಾರಿಗೊಳಿಸಿ ಯಶಸ್ವಿಯಾಗಿದೆ. ತೀರಾ ಸಣ್ಣ ಪ್ರಮಾಣದ ಜನರು ಮಾತ್ರ ಇನ್ನೂ ಇದರ ಲಾಭ ಪಡೆಯಲು ಆಗದಿರಬಹುದು. ಆದರೆ ಒಟ್ಟಾರೆಯಾಗಿ ಯೋಜನೆಗಳು ಯಶಸ್ವಿಯಾಗಿದ್ದು, ಜನಮನ್ನಣೆ ಗಳಿಸಿವೆ. ಆರ್ಥಿಕವಾಗಿ ಹಿಂದುಳಿದ, ಅಸಂಘಟಿತ ವಲಯದ ಅದೆಷ್ಟೋ ಕುಟುಂಬಗಳು ಯೋಜನೆಗಳಿಂದ ಪ್ರಯೋಜನ ಪಡೆದಿರುವುದು ಸರ್ಕಾರದ ಸಾಧನೆಯಾಗಿದೆ ಎಂದ ಶಾಸಕರು, ಹೊಸನಗರ ತಾಲ್ಲೂಕಿಗೆ ಮುಂದಿನ ವರ್ಷದ ಹೊತ್ತಿಗೆ ಕುಡಿಯುವ ನೀರಿಗೆ ಪ್ರತ್ಯೇಕ ವ್ಯವಸ್ಥೆ ಜಾರಿಯಾಗಲಿದೆ. ಚಕ್ರಾ ನಗರದ ಜಲಾಶಯದಿಂದ ನೀರು ಸರಬರಾಜು ಮಾಡುವ ಕಾಮಗಾರಿ ಸಧ್ಯದಲ್ಲಿಯೇ ಆರಂಭಗೊಳ್ಳಲಿದೆ. ಇದೊಂದು ವರ್ಷ ನೀರಿನ ಸಮಸ್ಯೆ ಸ್ವಲ್ಪ ತೊಂದರೆ ನೀಡಬಹುದು. ಜನತೆ ಈ ವಿಷಯದಲ್ಲಿ ಕೊಂಚ ಸುಧಾರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮಂಜುನಾಥ್‌ ಕೆ.ಆರ್, ಸದಸ್ಯ ವಾಟಗೋಡು ಸುರೇಶ್, ಬಗರ್‌ಹುಕುಂ ಸಮಿತಿ ಸದಸ್ಯೆ ಸಾಕಮ್ಮ ಮನೋಹರ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಓ ನರೇಂದ್ರಕುಮಾರ್, ತಹಶೀಲ್ದಾರ್ ರಶ್ಮಿ, ಸದಸ್ಯರಾದ ಸಂತೋಷ್ ಮಳವಳ್ಳಿ ಮತ್ತಿತರರು ಇದ್ದರು.


ಕಾಮೆಂಟ್‌ಗಳಿಲ್ಲ