ಹೊಸನಗರದ ಗೇರುಪುರದಲ್ಲಿ ಇಸ್ಪೀಟ್ : ಏಳು ಮಂದಿ ಪೊಲೀಸ್ ವಶಕ್ಕೆ
ಹೊಸನಗರ : ತಾಲ್ಲೂಕಿನ ಗೇರುಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎನ್ನುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಹೊಸನಗರ ಪೊಲೀಸರು, ಇಸ್ಪೀಟ್ ಆಟದಲ್ಲಿ ತೊಡಗಿದ್ದ 7 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್. ಹೆಬ್ಬಾಳ್ ಅವರ ಮಾರ್ಗದರ್ಶನದೊಂದಿಗೆ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಇಸ್ಪೀಟ್ ಆಟಕ್ಕೆ ಬಳಸಿದ್ದ 26,660 ರೂಪಾಯಿ ನಗದನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ