ಅತ್ಯುತ್ತಮ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುವ ಹೊಸನಗರ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ಕೋರ್ಸುಗಳಿಗೆ ಪ್ರವೇಶ ಪ್ರಾರಂಭ
ಹೊಸನಗರ : ಅತ್ಯುತ್ತಮ ಬೋಧನಾ ಕ್ರಮದಿಂದ ಪ್ರತೀ ವರ್ಷ ರ‍್ಯಾಂಕ್ ಗಳಿಸುತ್ತಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದ್ದು, ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಎಸ್ಸಿ ಪದವಿಗಳ ಪ್ರವೇಶಾತಿ ಆರಂಭಗೊಂಡಿದ್ದು, ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಅವಕಾಶ ಕಲ್ಪಿಸಿರುವುದಾಗಿ ಕಾಲೇಜಿನ ಪ್ರಾಚಾರ್ಯ ಡಾ. ಕೆ. ಉಮೇಶ್ ತಿಳಿಸಿದ್ದಾರೆ.
ನುರಿತ ಬೋಧಕರು, ಸುಸಜ್ಜಿತ ಗ್ರಂಥಾಲಯ, ಉತ್ತಮ ವಿಜ್ಞಾನ ಪ್ರಯೋಗಾಲಯ, ಎಲ್ಎಮ್ಎಸ್ ಆಧಾರಿತ ಶಿಕ್ಷಣ, ವಿದ್ಯಾರ್ಥಿ ವೇತನ, ಸರ್ಕಾರಿ ಹಾಸ್ಟೆಲ್ ಸೌಲಭ್ಯ, ಸುಸಜ್ಜಿತ ವಿಶಾಲ ಕ್ರೀಡಾಂಗಣ, ನುರಿತ ಉಪನ್ಯಾಸಕರು, ಪ್ರತಿ ಕೊಠಡಿ ಹಾಗೂ ಹೊರಾಂಗಣದಲ್ಲಿ ಸಿಸಿ ಕ್ಯಾಮರಾ ವ್ಯವಸ್ಥೆ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸ್ಕೌಟ್ಸ್ ಗೈಡ್ IQAC, ಉದ್ಯೋಗ ಮಾರ್ಗದರ್ಶನ ಕೋಶ, ವೈಫೈ ವ್ಯವಸ್ಥೆ, ಕಂಪ್ಯೂಟರ್ ಪ್ರಯೋಗಾಲಯ, ಕುಡಿಯುವ ನೀರಿನ ಸೌಲಭ್ಯ, ಮಹಿಳಾ ವಿಶ್ರಾಂತಿ ಕೊಠಡಿ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸೌಲಭ್ಯದೊಂದಿಗೆ ಅತ್ಯುತ್ತಮ ಶಿಕ್ಷಣ ವ್ಯವಸ್ಥೆಯನ್ನು ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಂದಿದ್ದು, ಆಸಕ್ತ ವಿದ್ಯಾರ್ಥಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಳ್ಳುವಂತೆ ಪ್ರಾಚಾರ್ಯ ಡಾ. ಕೆ. ಉಮೇಶ್ ಹಾಗೂ ಕಾಲೇಜಿನ ಉಪನ್ಯಾಸಕ ವರ್ಗ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯವರು ಕೋರಿದ್ದಾರೆ.
ನೂತನ ಪ್ರವೇಶಾತಿಗಾಗಿ ವಿದ್ಯಾರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ ಗೂಗಲ್ ಫಾರಂ ಭರ್ತಿ ಮಾಡಬಹುದು.
ಕಾಮೆಂಟ್‌ಗಳಿಲ್ಲ