Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ನಾಳೆ ಹೊಸನಗರಕ್ಕೆ ಕೆ.ಎಸ್. ಈಶ್ವರಪ್ಪ ಭೇಟಿ - ಪಕ್ಷದ ಕಚೇರಿಗೆ ಚಾಲನೆ - ಕಾರ್ಯಕರ್ತರ ಸಭೆಯಲ್ಲಿ ಭಾಗಿ

ಹೊಸನಗರ : 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಚುನಾವಣಾ ಕಣಕ್ಕೆ ಧುಮುಕಿರುವ ರಾಜ್ಯದ ಮಾಜಿ ಸಚಿವ, ಹಿಂದೂ ನಾಯಕ ಕೆ.ಎಸ್. ಈಶ್ವರಪ್ಪನವರು ಏಪ್ರಿಲ್‌ 17ರ ಬುಧವಾರ ಸಂಜೆ 4 ಗಂಟೆಗೆ ಪಟ್ಟಣಕ್ಕೆ ಆಗಮಿಸಿ, ತಮ್ಮ ಲೋಕಸಭಾ ಚುನಾವಣಾ ಕಾರ್ಯಾಲಯಕ್ಕೆ ಚಾಲನೆ ನೀಡಲಿದ್ದಾರೆ.

ಬಳಿಕ ಇಲ್ಲಿನ ಖಾಸಗಿ ಬಸ್ ನಿಲ್ದಾಣ ಮುಂಭಾಗದ ಈಡಿಗ ಸಭಾಭವನದಲ್ಲಿ ಸಂಜೆ 5 ಗಂಟೆಗೆ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಅಭಿಮಾನಿಗಳು, ಬೆಂಬಲಿಗರು ಭಾಗವಹಿಸುವಂತೆ ತಾಲ್ಲೂಕು ಸಂಚಾಲಕ ವಾಟಗೋಡು ಸುರೇಶ್ ಕೋರಿದ್ದಾರೆ.

ಕಾಮೆಂಟ್‌ಗಳಿಲ್ಲ