Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಮೂಲೆಗದ್ದೆ ಮಠಕ್ಕೆ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭೇಟಿ

ಹೊಸನಗರ : ತಾಲ್ಲೂಕಿನ ಇತಿಹಾಸ ಪ್ರಸಿದ್ದ ಮೂಲೆಗದ್ದೆ ಮಠದ ಸದಾಶಿವ ಶಿವಯೋಗ ಆಶ್ರಮಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ದಂಪತಿ ಭೇಟಿ ನೀಡಿ ಪೀಠಾಧ್ಯಕ್ಷ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಮಠಕ್ಕೆ ಬಂದ ಶಿವರಾಜ್‌ಕುಮಾರ್‌ ಹಾಗೂ ಗೀತಾ ಶಿವರಾಜ್‌ಕುಮಾರ್ ದಂಪತಿಗಳನ್ನು ಅಭಿನವ ಚನ್ನಬಸವ ಮಹಾಸ್ವಾಮಿಗಳು ಶಾಲು ಹೊದೆಸಿ, ಹಾರ ಹಾಕಿ ನೆನಪಿನ ಕಾಣಿಕೆ ಕೊಟ್ಟು ಆಶೀರ್ವದಿಸಿದರು.

ಈ ವೇಳೆ ಶಾಸಕ ಗೋಪಾಲಕೃಷ್ಣ ಬೇಳೂರು, ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಕಲಗೋಡು ರತ್ನಾಕರ, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಪಕ್ಷದ ಚುನಾವಣಾ ವೀಕ್ಷಕ ಅನಿಲ್ ಕುಮಾರ್ ತಡಕಲ್‌‌, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ, ಸಣ್ಣಕ್ಕಿ ಮಂಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ