Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆರ್‌‌. ಪ್ರಸನ್ನಕುಮಾರ್‌ ನೇಮಕ

ಶಿವಮೊಗ್ಗ : ಲೋಕಸಭಾ ಚುನಾವಣೆ ಬಿಸಿ ಏರುತ್ತಿರುವ ಹೊತ್ತಿನಲ್ಲೇ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌‌ ನೂತನ ಅಧ್ಯಕ್ಷರಾಗಿ ಆರ್‌‌. ಪ್ರಸನ್ನಕುಮಾರ್‌ ಅವರನ್ನು ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಕೆ.ಸಿ. ವೇಣುಗೋಪಾಲ್‌ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾಗಿದ್ದ ಹೆಚ್.ಎಸ್ ಸುಂದರೇಶ್ ಅವರನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ಹಿನ್ನೆಲೆಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಡಿ ಸುಂದರೇಶ್ ಅವರು ಜಿಲ್ಲಾಧ್ಯಕ್ಷ ಸ್ಥಾನ ತ್ಯಜಿಸಿದ್ದರಿಂದ ಆರ್. ಪ್ರಸನ್ನಕುಮಾರ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. 

ಜಿಲ್ಲಾ ಕಾಂಗ್ರೆಸ್‌‌, ಶಿವಮೊಗ್ಗ ನಗರಸಭೆ, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾಗಿ, ವಿಧಾನಪರಿಷತ್ ಸದಸ್ಯರಾಗಿ ಈಗಾಗಲೇ ಸೇವೆ ಸಲ್ಲಿಸಿರುವ ಪ್ರಸನ್ನಕುಮಾರ್‌ ಅವರು, ಪಕ್ಷದ ಅನುಭವಿ ಮುಖಂಡರಾಗಿರುವುದರಿಂದ ಈ ಜವಾಬ್ದಾರಿಯನ್ನು ಪಕ್ಷ ನೀಡಿದ್ದು, ಈ ಮೂಲಕ ಪ್ರಸನ್ನಕುಮಾರ್‌ ಅವರು ಎರಡನೇ ಬಾರಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ ನೇಮಕಗೊಂಡಂತಾಗಿದೆ. ಮತ್ತು ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಇನ್ನಷ್ಟು ಬಲ ಬಂದಂತಾಗಿದೆ. 

ಕಾಮೆಂಟ್‌ಗಳಿಲ್ಲ