ಇಂದಿನಿಂದ ಹೊಸನಗರ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡ ಹಾಗೂ ಪುನಃಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮ
ಹೊಸನಗರ : ಇಲ್ಲಿನ ನಗರ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡ ಹಾಗೂ ಪುನಃಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮಗಳು ಇಂದಿನಿಂದ 5 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ ಎಂದು ಶ್ರೀ ವೀರಾಂಜನೇಯ ಸೇವಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 9ರ ಮಂಗಳವಾರ ಶ್ರೀ ಕ್ರೋಧಿ ನಾಮ ಸಂವತ್ಸರದ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಣೆಗಳು ನಡೆಯಲಿದ್ದು, ಏಪ್ರಿಲ್ 12ರ ಶುಕ್ರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದೇವರ ಪುನರ್ ಪ್ರತಿಷ್ಠೆ, ಪ್ರಾಣ ಪ್ರತಿಷ್ಠೆ, ತತ್ವ ಕಲಶ ಸ್ಥಾಪನೆ, ತತ್ವ ಹೋಮ, ಶ್ರೀ ನಾಗದೇವರ ಪ್ರತಿಷ್ಠೆ, ಕಲಶಾಭಿಷೇಕ, ಸಾರ್ವಜನಿಕ ಅನ್ನ ಸಂತರ್ಪಣೆ, ಅಂದು ಸಂಜೆ ಮಂಡಲ ರಚನೆ, 108 ಕಲಶ ಸ್ಥಾಪನೆ, ಕಲಶಾದಿ ವಾಸ ಹೋಮ, ಗ್ರಾಮ ದೇವತೆ ಸಪರಿವಾರ ಶ್ರೀ ಚೌಡೇಶ್ವರಿ ದೇವಿ ಸನ್ನಿಧಾನದಲ್ಲಿ ವಾರ್ಷಿಕೋತ್ಸವ ಸಂಬಂಧ ಅಧಿವಾಸ ಹೋಮ, ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಸಮಿತಿ ತಿಳಿಸಿದೆ.
ಏಪ್ರಿಲ್ 13ರ ಶನಿವಾರ ಬೆಳಗ್ಗೆ ಶಾಂತಿ ಪ್ರಾಯಶ್ಚಿತ ಹೋಮ, ಕಲಶ ಅಭಿಷೇಕ, ಮಹಾಮಂಗಳಾರತಿ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ, ಸಂಜೆ 5:30 ರಿಂದ ಶ್ರೀ ವೀರಾಂಜನೇಯ ಸ್ವಾಮಿಯ ಪಲ್ಲಕ್ಕಿ ಉತ್ಸವ ಸುಮಧುರ ಮಂಗಳವಾದ್ಯದೊಂದಿಗೆ ಕುಣಿತ ಭಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ