ಹೊಸನಗರ ತಾಲ್ಲೂಕು ಜೆಡಿಎಸ್ ಮುಖಂಡ ಎಂ. ವಾಸುದೇವಾಚಾರ್ ಇನ್ನಿಲ್ಲ
ಹೊಸನಗರ : ತಾಲ್ಲೂಕು ವಿಶ್ವಕರ್ಮ ಸಮಾಜದ ಮುಖಂಡರು, ತಾಲ್ಲೂಕು ಜೆಡಿಎಸ್ ಮಾಜಿ ಅಧ್ಯಕ್ಷರು, ಪುರಸಭೆಯ ಮಾಜಿ ಸದಸ್ಯರು, ಸಾಗರ ಆಪ್ಸ್‌ಕೋಸ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಪಟ್ಟಣದ ಹಳೆ ಸಾಗರ ರಸ್ತೆಯ ನಿವಾಸಿ ಎಂ. ವಾಸುದೇವಾಚಾರ್ ಇಂದು ತಮ್ಮ ಸ್ವಗೃಹದಲ್ಲಿ 86ರ ಹರೆಯದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ನಾಲ್ವರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರು ವಿವಿಧ ಧಾರ್ಮಿಕ ಹಾಗೂ ಸಮಾಜ ಸೇವಾ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಸೇವೆ ಸಲ್ಲಿಸಿ, ಜನಾನುರಾಗಿಯಾಗಿದ್ದರು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ರಿಪ್ಪನ್‌ಪೇಟೆ ವರ್ತೇಶ್, ಜೆಡಿಎಸ್ ಮಾಜಿ ಅಧ್ಯಕ್ಷರು, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾದ ಎಂ.ಎ. ಜಯರಾಮ್ ಹಾಗೂ ಹಲವು ಮುಖಂಡರು ಮೃತರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾಮೆಂಟ್‌ಗಳಿಲ್ಲ