Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಎಸ್‌.ಎಸ್‌.ಎಲ್‌.ಸಿ ಫಲಿತಾಂಶ - ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯ ಕು.ಅಮೂಲ್ಯಗೆ 586 ಅಂಕ

ಹೊಸನಗರ : ಇಲ್ಲಿನ ಗೇರುಪುರ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಕು.ಅಮೂಲ್ಯ ಈ ಬಾರಿಯ ಎಸ್‌.ಎಸ್‌.ಎಲ್‌.ಸಿ ಫಲಿತಾಂಶದಲ್ಲಿ 586 (93.76%) ಅಂಕ ಗಳಿಸುವುದರೊಂದಿಗೆ ವಸತಿ ಶಾಲೆಯ ಟಾಪರ್‌ ಆಗಿ ಹೊರಹೊಮ್ಮಿದ್ದು, ಈ ಮೂಲಕ ವಸತಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಈ ಬಾರಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಬರೆದಿದ್ದ ವಸತಿ ಶಾಲೆಯ ಒಟ್ಟು 40 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 27 ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದು ಪಾಸಾಗುವುದರೊಂದಿಗೆ ವಸತಿ ಶಾಲೆಯು ಸತತ ಎರಡನೇ ವರ್ಷದಲ್ಲಿ 100% ಫಲಿತಾಂಶದ ಸಾಧನೆ ಮಾಡಿದಂತಾಗಿದೆ. 

ವಸತಿ ಶಾಲೆಯ ವಿದ್ಯಾರ್ಥಿಗಳ ಈ ಸಾಧನೆಗೆ ವಸತಿ ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ ಎಂ. ಪಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ಪೋಷಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳಿಲ್ಲ