ಆನಂದಪುರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್ಸು - 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಸಾಗರ : ಇಲ್ಲಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಸಾಗರದಿಂದ ಬೆಳ್ತಂಗಡಿಗೆ ಹೋಗುತ್ತಿದ್ದ ಖಾಸಗಿ ಬಸ್ಸು (KA-20 C 6997) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ 7.30ಕ್ಕೆ ಸಂಭವಿಸಿದೆ.
ಬೆಳಿಗ್ಗೆ ಒಂದೇ ಸಮನೆ ಸುರಿಯುತ್ತಿದ್ದ ಅತಿಯಾದ ಮಳೆಯಿಂದ ತಿರುವಿನಲ್ಲಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗುತ್ತಿದ್ದು, ತೀವ್ರವಾಗಿ ಗಾಯಗೊಂಡ ಪ್ರಯಾಣಿಕರನ್ನು ಸಾಗರ, ಆನಂದಪುರ ಹಾಗೂ ಶಿವಮೊಗ್ಗದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ.
ಕಾಮೆಂಟ್‌ಗಳಿಲ್ಲ