Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರದಲ್ಲಿಂದು ಅಂಗನವಾಡಿ ಕಾರ್ಯಕರ್ತೆಯರು - ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್ ವಿತರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು | ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪ್ರಶಂಸಿಸಿದ ಶಾಸಕರು

ಹೊಸನಗರ : ಕೊರೋನಾ ಸಮಯದಲ್ಲಿ ಗಡಿ ಕಾಯುವ ಸೈನಿಕರಂತೆ ಧೃತಿಗೆಡದೆ ಜನರಿಗಾಗಿ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ನಾವು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಹೇಳಿದರು.

ಇಂದು ಪಟ್ಟಣದ ಈಡಿಗ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ಪೋಷಣ್‌‌ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್ ವಿತರಿಸಿ ಅವರು ಮಾತನಾಡುತ್ತಿದ್ದರು.

ಇದೀಗ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಮಕ್ಕಳ ಪೋಷಣೆ ಹಾಗೂ ಸಂರಕ್ಷಣೆಯ ಜವಾಬ್ದಾರಿಯನ್ನು ನೀಡಿದ್ದು, ಈ ಜವಾಬ್ದಾರಿಯನ್ನು ಅಂಗನವಾಡಿ ಕಾರ್ಯಕರ್ತೆಯರು ಶ್ರದ್ಧೆಯಿಂದ ನಿಭಾಯಿಸುವ ಭರವಸೆ ನನಗಿದೆ ಎಂದು ಹೇಳಿದ ಶಾಸಕರು, ತಮ್ಮ ಸೇವೆಯಲ್ಲಿ ಏನಾದರೂ ಕುಂದುಕೊರತೆ ಉಂಟಾದಲ್ಲಿ ತಕ್ಷಣವೇ ನನ್ನ ಗಮನಕ್ಕೆ ತನ್ನಿ ಎಂದು ಹೇಳಿ ಅಂಗನವಾಡಿ ಕಾರ್ಯಕರ್ತರಿಗೆ ಇನ್ನಷ್ಟು ಭರವಸೆ ತುಂಬಿದರು.

ಹೊಸನಗರ ತಹಶೀಲ್ದಾರ್‌‌ ಶ್ರೀಮತಿ ರಶ್ಮಿ ಅಧ್ಯಕ್ಷತೆ ವಹಿಸಿದ ಸಮಾರಂಭದಲ್ಲಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುರೇಶ್, ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯ ರಾಜ್ಯ ಸಂಚಾಲಕ ರವೀಂದ್ರ ಸಾಗರ್, ಹೊಸನಗರ ತಾಲ್ಲೂಕು ವೃತ್ತ ಆರಕ್ಷಕ ನಿರೀಕ್ಷಕ ಗುರಣ್ಣ ಎಸ್. ಹೆಬ್ಬಾಳ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಶ್ರೀಮತಿ ವೀಣಾ ಮಂಜುನಾಥ್ ಪ್ರಾರ್ಥಿಸಿದರು. ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಿಚಾರಕಿ ಎನ್‌‌. ವೀರಮ್ಮ ಸ್ವಾಗತಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ. ಸುರೇಶ್ ಪ್ರಾಸ್ತಾವಿಕ ಭಾಷಣ ಮಾಡಿ, ಯೋಜನೆಯ ವಿವರ ಸ್ಮಾರ್ಟ್ ಫೋನ್ ಬಳಕೆ ಬಗ್ಗೆ ವಿವರಿಸಿದರು. ದಿವ್ಯ ಹಾಗೂ ಸುಜಾತ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕಿ ಶ್ರೀಮತಿ ವನಮಾಲಾ ವಂದಿಸಿದರು.

ಶಾಸಕರು ಹಾಗೂ ಮುಖ್ಯ ಅತಿಥಿಗಳು ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಫೋನ್ ಹಾಗೂ ಆರೋಗ್ಯ ಕಿಟ್ ವಿತರಿಸಿದರು.

ಕಾಮೆಂಟ್‌ಗಳಿಲ್ಲ