Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ತಾಲ್ಲೂಕು ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 118 ಮಿಲಿ ಮೀಟರ್ ಮಳೆ

ಹೊಸನಗರ : ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲ್ಲೂಕಿನಾದ್ಯಂತ ಅರಿದ್ರಾ ಮಳೆ ಅಬ್ಬರ ಒಂದೇ ಸಮನೆ ಮುಂದುವರಿದಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ತಾಲ್ಲೂಕಿನ ಮಾಸ್ತಿಕಟ್ಟೆಯಲ್ಲಿ 118 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ.

ಹುಲಿಕಲ್ಲಿನಲ್ಲಿ 117, ಯಡೂರಿನಲ್ಲಿ 86, ಮಾಣಿಯಲ್ಲಿ 74, ಬಿದನೂರು ನಗರದಲ್ಲಿ 64, ಹೊಸನಗರದಲ್ಲಿ 57 ಮಿಲಿ ಮೀಟರ್ ಮಳೆ ಬಿದ್ದಿರುತ್ತದೆ.

ಲಿಂಗನಮಕ್ಕಿ ಜಲಾಶಯದಲ್ಲಿ ಕಳೆದ ಬಾರಿಗಿಂತ ಏಳು ಅಡಿ ನೀರು ಹೆಚ್ಚು ಸಂಗ್ರಹವಾಗಿದ್ದು ಇಂದು ಬೆಳಿಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟ 1747.60 ಅಡಿ ತಲುಪಿದ್ದು ಜಲಾಶಯಕ್ಕೆ 16984 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಗೆ ಜಲಾಶಯದ ನೀರಿನ ಮಟ್ಟ1740.20 ಅಡಿ ದಾಖಲಾಗಿತ್ತು.

ಕಾಮೆಂಟ್‌ಗಳಿಲ್ಲ