ಅತ್ಯುತ್ತಮ ಬಜೆಟ್ ಎನ್ನುವುದರಲ್ಲಿ ಎರಡು ಮಾತಿಲ್ಲ - ಸೊನಲೆಯಲ್ಲಿ ಮಾಜಿ ಶಾಸಕ ಬಿ. ಸ್ವಾಮಿ ರಾವ್
ಹೊಸನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಗಳವಾರ ಸಂಸತ್ತಿನಲ್ಲಿ ಘೋಷಿಸಿದ ಆರ್ಥಿಕ ಬಜೆಟ್ ಅತ್ಯುತ್ತಮವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಮಾಜಿ ಶಾಸಕ ಬಿ. ಸ್ವಾಮಿರಾವ್ ಹೇಳಿದರು.
ಇಂದು ಸೊನಲೆ ಗ್ರಾಮದ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಜೆಟ್ ದೇಶದ ಅಭಿವೃದ್ಧಿಯ ಸಂಕೇತವಾಗಿದೆ. ಅಲ್ಲದೆ, ಯುವ ಸಮೂಹ ಹಾಗೂ ರೈತಪರ ಆಗಿದ್ದು, ಆರ್ಥಿಕ ವಲಯದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸುವಂತಿದೆ. ಕೃಷಿ, ರಕ್ಷಣೆ, ಆರೋಗ್ಯ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಯುವ ಸಮೂಹದ ಉದ್ಯೋಗ ಸೃಷ್ಟಿಗೆ ಬಜೆಟ್ಟಿನಲ್ಲಿ ವಿಫುಲ ಅವಕಾಶ ಕಲ್ಪಿಸಲಾಗಿದೆ ಎಂದರು.
ಈ ಬಜೆಟ್ ಲೋಕಸಭಾ ಚುನಾವಣೆ ಪೂರ್ವ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕಾಪಿ ಪೇಸ್ಟಿನಂತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಬೆಟ್ಟು ತೋರಿಸುವ ಕ್ರಮವನ್ನು ಕಾಂಗ್ರೆಸ್ಸಿಗರು ಮೊದಲು ಕೈಬಿಡಬೇಕು ಎಂದ ಅವರು, ಬಜೆಟ್ ರೈತವಿರೋಧಿ ಎನ್ನುವ ರಾಜ್ಯದ ಸಹಕಾರಿ ಸಚಿವರು ರಾಜ್ಯದ ರೈತಾಪಿ ವರ್ಗದ ಕೃಷಿಸಾಲ ಸಂಪೂರ್ಣ ಮನ್ನಾ ಮಾಡುವ ಮೂಲಕ ರೈತಪರ ನಿಲುವು ತಾಳಲಿ ಎಂದು ರಾಜ್ಯ ಸರ್ಕಾರಕ್ಕೇ ತಿರುಗೇಟು ನೀಡಿದರು.
ಕಾಮೆಂಟ್‌ಗಳಿಲ್ಲ