Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಬೇಡಿಕೆ ಈಡೇರಿಸಲು ಆಗ್ರಹ - ಹೊಸನಗರದಲ್ಲಿ ನೌಕರರಿಂದ ತಾಲ್ಲೂಕು ಆಡಳಿತಕ್ಕೆ ಮನವಿ

ಹೊಸನಗರ : ಈಗಾಗಲೇ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್‌ಪಿಎಸ್ ರದ್ದುಗೊಳಿಸಿ, ಯುಪಿಎಸ್ ಜಾರಿಗೊಳಿಸುವ ಭರವಸೆಯನ್ನು ನೀಡಿದ್ದು ಈ ಭರವಸೆಯಂತೆ ಶೀಘ್ರದಲ್ಲಿ ಹಳೆಯ ನಿಶ್ಚಿತ ಪಿಂಚಣಿ ಜಾರಿಗೊಳಿಸಬೇಕು. ಒಪಿಎಸ್ ಜಾರಿ ವಿಳಂಬವಾದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವಂತೆ ಎನ್‌‌ಪಿಎಎಸ್‌‌ನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಹೊಸನಗರ ತಾಲ್ಲೂಕು ಪಿಂಚಣಿ ವಂಚಿತ ನೌಕರರ ಸಂಘದ ಅಧ್ಯಕ್ಷ ಸಿ.ಚಂದ್ರು ಸೇರಿದಂತೆ ಸಂಘದ ನೌಕರರು ಇಂದು ತಾಲ್ಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅಂದರೆ ನೇಮಕಾತಿ ಪ್ರಾಧಿಕಾರದ ವಂತಿಕೆಯ ಬದಲಾಗಿ ಸರ್ಕಾರವು ಭರಿಸಲು ಕ್ರಮ ವಹಿಸಬೇಕು. ಕರ್ನಾಟಕ ಖಾಸಗಿ ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳ ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ ವಿಧೇಯಕ 2014ಕ್ಕೆ ತಿದ್ದುಪಡಿ ತಂದು ಅಥವಾ ಭವಿಷ್ಯ ವರ್ತಿಯಾಗಿ ಜಾರಿಗೆ ಬರುವಂತೆ ಕ್ರಮ ವಹಿಸುವುದು. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ದಶಕಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು. ಅನುದಾನಿತ ನೌಕರರಿಗೆ ಕೂಡ ಸರ್ಕಾರಿ ನೌಕರರಂತೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಸರಕಾರಿ ಶಾಲಾ ಕಾಲೇಜುಗಳು ಮತ್ತು ಅನುದಾನಿತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಲಿ ಹಾಗೂ ನೌಕರರಿಗೇ ಆಗಲಿ ಯಾವುದೇ ತಾರತಮ್ಯ ನೀತಿ ಅನುಸರಿಸಬಾರದು ಮೊದಲಾದ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಇಂದು ತಹಶೀಲ್ದಾರ್ ರಶ್ಮಿ ಅವರಿಗೆ ಸಲ್ಲಿಸಿದರು.

ಪಿಂಚಣಿ ವಂಚಿತ ನೌಕರರ ಸಂಘದ ತಾಲ್ಲೂಕ ಅಧ್ಯಕ್ಷ ಸಿ. ಚಂದ್ರು, ಉಪಾಧ್ಯಕ್ಷ ಎನ್. ಸುಧಾಕರ್, ಪ್ರಧಾನ ಕಾರ್ಯದರ್ಶಿ ಡಿ. ಧರ್ಮಪ್ಪ, ಎಂ. ಎಸ್. ಕುಮಾರ್, ಎಂ. ಎಸ್. ಈಶ್ವರಪ್ಪ, ಚಂದ್ರಶೇಖರ್, ರಾಮಯ್ಯ, ಅಣ್ಣಪ್ಪ, ಪ್ರಶಾಂತ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಕಾಮೆಂಟ್‌ಗಳಿಲ್ಲ