ಭಾರೀ ಮಳೆ ಹಿನ್ನೆಲೆ - ನಾಳೆ ಹೊಸನಗರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಹೊಸನಗರ : ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ಅಂದರೆ ಜುಲೈ 18ರ ಗುರುವಾರ ರಜೆ ಘೋಷಣೆ ಮಾಡಿ ಹೊಸನಗರ ತಾಲ್ಲೂಕಿನ ತಹಶೀಲ್ದಾರ್ ರಶ್ಮಿ ಹೆಚ್. ಅವರು ಆದೇಶ ಹೊರಡಿಸಿದ್ದಾರೆ.
ನಿರಂತರ ಮಳೆಯ ಕಾರಣ ನಿನ್ನೆ ಅಂದರೆ ಜುಲೈ 15ನೇ ತಾರೀಖಿನ ಮಂಗಳವಾರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆನಂತರ ಶಿವಮೊಗ್ಗ ಜಿಲ್ಲೆಯ ಎಲ್ಲೆಡೆ ವ್ಯಾಪಕ ಮಳೆಯಾಗುತ್ತಿದ್ದಿದ್ದರಿಂದ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರು.
ಕಾಮೆಂಟ್‌ಗಳಿಲ್ಲ