ರಿಪ್ಪನ್‌ಪೇಟೆಯ ಚಂದಾಳದಿಂಬದಲ್ಲಿ ಭಾರೀ ಮಳೆಗೆ ಕುಸಿದುಬಿತ್ತು ಇಡೀ ಮನೆ - ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಕುಟುಂಬ
ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಡಗೆರೆ ಶಾಲೆ ಸಮೀಪದ ಚಂದಾಳದಿಂಬದಲ್ಲಿ ಭಾರೀ ಮಳೆಗೆ ಮನೆಯೊಂದು ಸಂಪೂರ್ಣವಾಗಿ ಕುಸಿದು ಬಿದ್ದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಜೋರು ಗಾಳಿ ಮತ್ತು ಮಳೆಯಿಂದಾಗಿ ಇಡೀ ಮನೆ ಕುಸಿದರೂ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಇದು ಅಮರ್ ಸಿಂಗ್ ಬಿನ್ ಬಿಷ್ಣುಸಿಂಗ್, ರೇಖಾ ದಂಪತಿಗಳಿಗೆ ಸೇರಿದ ಮನೆಯಾಗಿದೆ. ವಿಪರೀತ ಮಳೆ ಇದ್ದಿದ್ದರಿಂದ ಭಯಗೊಂಡು ರಾತ್ರಿ ಮನೆಯಲ್ಲಿ ಉಳಿಯದೇ ಸಂಬಂಧಿಕರ ಮನೆಗೆ ತೆರಳಿದ್ದರಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ.
ಮನೆ ಕುಸಿತದ ಸ್ಥಳಕ್ಕೆ ಪಿಡಿಓ ಭರತ್, ಗ್ರಾಮ ಲೆಕ್ಕಾಧಿಕಾರಿ ಅಂಬಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಮೆಂಟ್‌ಗಳಿಲ್ಲ