Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಎಚ್ಚರ! ಯಾವುದೇ ಕ್ಷಣದಲ್ಲಿ ಲಿಂಗನಮಕ್ಕಿ ನೀರು ಹೊರ ಬಿಡುವ ಸಾಧ್ಯತೆ - 1801 ಅಡಿ ತಲುಪಿದ ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ

ಸಾಗರ : ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ 1801 ಅಡಿ ತಲುಪಿದ್ದು, ಈಗಾಗಲೇ ಶೇ.65ರಷ್ಟು ನೀರು ಸಂಗ್ರಹವಾಗಿದೆ. 60 ಸಾವಿರ ಕ್ಯೂಸೆಕ್ಸ್‌‌ಗಿಂತಲೂ ಹೆಚ್ಚಿನ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಇದೇ ರೀತಿ ಮುಂದುವರಿದಲ್ಲಿ ಶೀಘ್ರದಲ್ಲಿ ಜಲಾಶಯ ತುಂಬುವ ಸಾಧ್ಯತೆ ಇದೆ.

CLICK ಮಾಡಿ - ಅತ್ಯುತ್ತಮ ಬಜೆಟ್ ಎನ್ನುವುದರಲ್ಲಿ ಎರಡು ಮಾತಿಲ್ಲ - ಸೊನಲೆಯಲ್ಲಿ ಮಾಜಿ ಶಾಸಕ ಬಿ. ಸ್ವಾಮಿ ರಾವ್

ಈ ಹಿನ್ನೆಲೆಯಲ್ಲಿ ಅಣೆಕಟ್ಟಿನ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಸಮಯದಲ್ಲೂ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಗಲ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು (ಕಾಮಗಾರಿ) ಮೊದಲ ಮುನ್ನೆಚ್ಚರಿಕೆಯ ಸೂಚನೆ ನೀಡಿದ್ದಾರೆ.

ಅಣೆಕಟ್ಟೆಯ ಕೆಳದಂಡೆ ಹಾಗೂ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ.

ಕಾಮೆಂಟ್‌ಗಳಿಲ್ಲ