ವ್ಯಾಪಕ ಮಳೆ ಹಿನ್ನೆಲೆ - ಹೊಸನಗರ ತಾಲ್ಲೂಕಿನ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
ಹೊಸನಗರ : ತಾಲ್ಲೂಕಿನೆಲ್ಲೆಡೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅಂದರೆ ದಿನಾಂಕ 31-07-2024ರ ಬುಧವಾರದಂದು ತಾಲ್ಲೂಕಿನ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ತಹಶೀಲ್ದಾರ್ ರಶ್ಮಿ ಹೆಚ್.ಜೆ ರಜೆ ಘೋಷಿಸಿ ಇಂದು ಆದೇಶ ಹೊರಡಿಸಿದ್ದಾರೆ.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ ಪಿಡಿಎಫ್ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಸದರಿ ರಜೆ ದಿನದಂದು ನಡೆಯಬೇಕಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ತಹಶೀಲ್ದಾರ್ ಆದೇಶಿಸಿದ್ದಾರೆ.
ಕಳೆದ ವಾರ ಪೂರ್ತಿ ತಾಲ್ಲೂಕಿನ ಎಲ್ಲಾ ಶಾಲಾ - ಕಾಲೇಜುಗಳಿಗೆ ’ಮಳೆಯ ರಜೆ’ ನೀಡಲಾಗಿತ್ತು. ಈಗ ಮತ್ತೆ ತಾಲ್ಲೂಕಿನೆಲ್ಲೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಹಲವೆಡೆ ಸೇತುವೆ ಕುಸಿತದಂತಹ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಿಸಲಾಗಿದೆ.
ಕಾಮೆಂಟ್‌ಗಳಿಲ್ಲ