Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಸೆಪ್ಟೆಂಬರ್‌ 03ರಂದು ಹೊಸನಗರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆ

ಹೊಸನಗರ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ನಡೆಯುವ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆ ಹೊಸನಗರ ತಾಲ್ಲೂಕಿಗೆ ಸಂಬಂಧಿಸಿದಂತೆ ದಿನಾಂಕ 03/09/2024 ರಂದು ಹೊಸನಗರ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗಿದ್ದು, ಆಯಾ ತಾಲ್ಲೂಕಿನ ಕ್ರೀಡಾಪಟುಗಳು ಆಯಾ ತಾಲ್ಲೂಕಿನ ಸ್ಪರ್ಧೆಗಳಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಆಧಾರ್ ಕಾರ್ಡ್‌‌ನ್ನು ಕಡ್ಡಾಯವಾಗಿ ತರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

CLICK ಮಾಡಿ - ಆಗಸ್ಟ್ 21 ರಂದು ಹೊಸನಗರದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ವೈಭವದ ಆರಾಧನಾ ಮಹೋತ್ಸವ

ಗುಂಪು ಸ್ಪರ್ಧೆಗಳನ್ನು ಏರ್ಪಡಿಸಲು ಕನಿಷ್ಠ 4 ತಂಡಗಳು ಇರಬೇಕು, ಇಲ್ಲದಿದ್ದಲ್ಲಿ ಆಯ್ಕೆ ನಡೆಸಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು. ಒಬ್ಬರಿಗೆ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ/ಆಯ್ಕೆ ತಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ಬೆಳಿಗ್ಗೆ 11.00 ಗಂಟೆಯೊಳಗೆ ನೋಂದಾವಣೆ ಮಾಡಿಕೊಂಡವರಿಗೆ ಮಾತ್ರ ಆಟವಾಡುವ ಅವಕಾಶ ಮತ್ತು ಮಧ್ಯಾಹ್ನದ ಲಘು ಉಪಹಾರವಿದ್ದು, ಸಮಯಕ್ಕೆ ಸರಿಯಾಗಿ ಹಾಜರಿರದ ತಂಡ ಹಾಗೂ ಅಭ್ಯರ್ಥಿಗಳನ್ನು ನಿರ್ದಾಕ್ಷಿಣ್ಯವಾಗಿ ಸ್ಪರ್ಧೆಯಿಂದ ಹೊರಗಿಡಲಾಗುವುದು ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

VIDEO - ರಿಪ್ಪನ್‌ಪೇಟೆ ಹಾಸ್ಟೆಲ್ ಮಕ್ಕಳ ಊಟದಲ್ಲಿ ಎಪ್ರತಪ್ರಾ... ವಾರ್ಡನ್‌ ಸಸ್ಪೆಂಡ್‌ ಮಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು

ಆಸಕ್ತ ಕ್ರೀಡಾಪಟುಗಳು ಆಯಾ ದಿನಾಂಕಗಳಂದು ಆಯಾ ತಾಲ್ಲೂಕಿನ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.00ರೊಳಗಾಗಿ ಹಾಜರಿದ್ದು, ಸಂಬಂಧಪಟ್ಟವರಲ್ಲಿ ವರದಿ ಮಾಡಿಕೊಂಡು ಹೆಸರು ನೋಂದಾಯಿಸಿಕೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಹೊಸನಗರ ತಾಲ್ಲೂಕಿನ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಹೊಸನಗರ ತಾಲ್ಲೂಕು ಮಾತ್ರವಲ್ಲದೇ ಜಿಲ್ಲೆಯ ಇತರೆ ತಾಲ್ಲೂಕುಗಳಲ್ಲಿಯೂ ಆಯ್ಕೆ ನಡೆಯಲಿದ್ದು, ದಿನಾಂಕ 01/09/2024 ರಂದು ಶಿಕಾರಿಪುರ ತಾಲ್ಲೂಕು ಕ್ರೀಡಾಂಗಣ, ದಿನಾಂಕ 10/09/2024 ರಂದು ಶಿವಮೊಗ್ಗ ನೆಹರು ಕ್ರೀಡಾಂಗಣ, ದಿನಾಂಕ 12/09/2024 ರಂದು ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ, ದಿನಾಂಕ 14/09/2024 ರಂದು ಸಾಗರದ ನೆಹರೂ ಮೈದಾನ, ದಿನಾಂಕ 15/09/2024 ರಂದು ಭದ್ರಾವತಿ ವಿ.ಐ.ಎಸ್.ಎಲ್. ಕ್ರೀಡಾಂಗಣ ಮತ್ತು ಸೊರಬ ತಾಲೂಕು ಆನವಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ.


ಕಾಮೆಂಟ್‌ಗಳಿಲ್ಲ