Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲ್ಲೂಕಿಗೆ ಈವರೆಗೆ ಅಂದಾಜು 5 ಕೋಟಿ ರೂಗಳಷ್ಟು ನೆರವು - ಟ್ರಸ್ಟ್‌‌ನ ಯೋಜನಾಧಿಕಾರಿ ಆರ್. ಪ್ರದೀಪ್ | ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ

ಹೊಸನಗರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಹೊಸನಗರ ಇದರ ವಿವಿಧ ಯೋಜನೆಗಳಡಿ ತಾಲ್ಲೂಕಿನಲ್ಲಿ ಈವರೆಗೆ ಅಂದಾಜು 5 ಕೋಟಿ ರೂಗಳಷ್ಟು ನೆರವನ್ನು ನೀಡಲಾಗಿದೆ ಎಂದು ಟ್ರಸ್ಟ್‌‌ನ ಯೋಜನಾಧಿಕಾರಿ ಆರ್. ಪ್ರದೀಪ್ ತಿಳಿಸಿದರು.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ಅವರು ಇಂದು ಪಟ್ಟಣದ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ಹಾಗೂ ಪೂಜ್ಯರ ಆಶೀರ್ವಾದ ಪೂರ್ವಕ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

VIDEO - ರಿಪ್ಪನ್‌ಪೇಟೆ ಹಾಸ್ಟೆಲ್ ಮಕ್ಕಳ ಊಟದಲ್ಲಿ ಎಪ್ರತಪ್ರಾ... ವಾರ್ಡನ್‌ ಸಸ್ಪೆಂಡ್‌ ಮಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಯೋಜನೆಯ ಜಿಲ್ಲಾ ನಿರ್ದೇಶಕ ಮುರಳೀಧರ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಎನ್. ಆರ್. ದೇವಾನಂದ, ವಕೀಲರಾದ ಮೋಹನ್ ಜಿ. ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್. ಆರ್. ಕೃಷ್ಣಮೂರ್ತಿ, ಶಿಕ್ಷಣ ಸಂಯೋಜಕ ಕರಿಬಸಪ್ಪ ಮುಖ್ಯ ಅತಿಥಿಗಳಾಗಿ  ಪಾಲ್ಗೊಂಡು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಕಾರ್ಯಕ್ಷಮತೆ ಅವಿಸ್ಮರಣೀಯವಾದದ್ದು. ಶಾಲೆಗಳಿಗೆ ಬೆಂಚ್, ಡೆಸ್ಕ್‌ಗಳನ್ನು ನೀಡುವ, ವಿದ್ಯಾರ್ಥಿ ವೇತನವನ್ನು ವಿತರಿಸುವ ಹಾಗೂ ಶಿಕ್ಷಕರ ಕೊರತೆಯಿದ್ದಲ್ಲಿ ಯೋಜನೆಯಡಿ ವೇತನವನ್ನು ನೀಡುವ ಮೂಲಕ ಶಿಕ್ಷಕರನ್ನು ನೇಮಕ ಮಾಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಹುಟ್ಟು ಹಾಕಿದೆ ಎಂದು ತಿಳಿಸಿದರು. ಇದರೊಂದಿಗೆ ಪಾನಮುಕ್ತ ಶಿಬಿರ ಆಯೋಜಿಸುವ ಮೂಲಕ ಮದ್ಯವ್ಯಸನಿಗಳನ್ನು ವ್ಯಸನದಿಂದ ಹೊರತಂದು ಸಮಾಜಮುಖಿಯಾಗುವಂತೆ ಮಾಡುತ್ತಿರುವ ಕೆಲಸ ಅಭಿನಂದನಾರ್ಹವಾಗಿದೆ ಎಂದು ತಿಳಿಸಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಮಾಡಿದರು.

ರಕ್ಷಿತಾ ಹಾಗೂ ರಶ್ಮಿ ಪ್ರಾರ್ಥಿಸಿದರು. ನಾಗೇಶ್ ಸ್ವಾಗತಿಸಿದರು. ತಿಮ್ಮಪ್ಪ ಕಾರ್ಯಕ್ರಮ ನಿರೂಪಿಸಿದರು. ಸುಭಾಷ್ ವಂದಿಸಿದರು.


ಕಾಮೆಂಟ್‌ಗಳಿಲ್ಲ