Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಕಡಸೂರು ಗ್ರಾಮದ 1 ಎಕರೆ ಅರಣ್ಯ ಒತ್ತುವರಿ ತೆರವು

ಹೊಸನಗರ : 2021-22ರ ಅರಣ್ಯ ಪ್ರದೇಶ ಒತ್ತುವರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಂದು ಇಲಾಖೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖಾ ಸಿಬ್ಬಂದಿಗಳು ತಾಲ್ಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ಸ.ನಂ.72ರ ಪರಿಭಾವಿತ ಅರಣ್ಯ ಪ್ರದೇಶಕ್ಕೆ ತೆರಳಿ, ಸ್ಥಳದಲ್ಲಿ ಇಂಗು ಗುಂಡಿ ನಿರ್ಮಿಸಿ, ಕಾಡುಜಾತಿಯ ಗಿಡಗಳನ್ನು ನೆಟ್ಟು, ಸುಮಾರು ಒಂದು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದರು.

ಈ ತೆರವು ಕಾರ್ಯವು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹೊಸನಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದಿದೆ.

ಕಾಮೆಂಟ್‌ಗಳಿಲ್ಲ