Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ ಮತ್ತು ಶ್ರೀ ವ್ಯಾಸ ಮಹರ್ಷಿ ಗುರುಕುಲದಲ್ಲಿ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆ

ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಉಮೇಶ್ ಕೆ. ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಡಾ. ಪ್ರಭಾಕರ್ ರಾವ್ ಕೆ. ಅವರು ಭಾರತ ಸ್ವಾತಂತ್ರ್ಯ ಚಳವಳಿ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಶ್ರೀಧರ್ ಹಳಗುಂದ, ಡಾ. ಕವಿತಾ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಮಂದಾರ ಟಿ. ಮಾಡಿದರು. ದೊಡ್ಡಯ್ಯ ಹೆಚ್. ಸ್ವಾಗತಿಸಿದರು. ಡಾ. ಬಸವರಾಜಪ್ಪ ಎಂ. ಟಿ. ವಂದಿಸಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವ್ಯಾಸ ಮಹರ್ಷಿ ಗುರುಕುಲದಲ್ಲಿ ಮೂಲೆಗದ್ದೆ ಶ್ರೀಗಳಿಂದ ಧ್ವಜಾರೋಹಣ :

ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದಲ್ಲಿ ನಡೆದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಮೂಲೆಗದ್ದೆ ಶ್ರೀ ಸದಾನಂದ ಶಿವಾಯೋಗಾಶ್ರಮದ ಶ್ರೀ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು ನೆರವೇರಿಸಿ, ವಿದ್ಯಾರ್ಥಿಗಳಿಗೆ ಸ್ವಾತಂತ್ರ‍್ಯ ಹೋರಾಟದ ಮಹತ್ವವನ್ನು ವಿವರಿಸಿದರು. 

CLICK ಮಾಡಿ - ಹೊಸನಗರ ಪಟ್ಟಣದೆಲ್ಲೆಡೆ ಸಡಗರ ಸಂಭ್ರಮದ ಸ್ವಾತಂತ್ರ‍್ಯೋತ್ಸವ

ಕಾಮೆಂಟ್‌ಗಳಿಲ್ಲ