Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ನಾಳೆ ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ರಕ್ತದಾನ ಹಾಗೂ ರಕ್ತ ಗುಂಪು ಪರಿಶೀಲನಾ ಶಿಬಿರ

ಹೊಸನಗರ : ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಯುವ ರೆಡ್ ಕ್ರಾಸ್, ಎನ್ಎಸ್ಎಸ್ ಘಟಕ ಒಂದು ಮತ್ತು ಎರಡು, ರೋವರ್ಸ್ ಅಂಡ್ ರೇಂಜರ್ಸ್, ಹಿರಿಯ ವಿದ್ಯಾರ್ಥಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಹೊಸನಗರ ಶಾಖೆ, ಭಾರತೀಯ ರೆಡ್ ಕ್ರಾಸ್‌ ಸಂಜೀವಿನಿ ರಕ್ತನಿಧಿ ಯೋಜನೆ ಶಿವಮೊಗ್ಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಾಳೆ ಅಂದರೆ ಆಗಸ್ಟ್ 8ರ ಗುರುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ರಕ್ತ ಗುಂಪು ಪರಿಶೀಲನಾ ಶಿಬಿರ ನಡೆಯಲಿದೆ.

ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಅಧ್ಯಕ್ಷತೆಯಲ್ಲಿ ಶಿಬಿರ ನಡೆಯಲಿದ್ದು, ಈ ಶಿಬಿರದಲ್ಲಿ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಕಾರ್ಯಕ್ರಮ ಅಧಿಕಾರಿ ಹೆಚ್. ದೊಡ್ಡಯ್ಯ ಕೋರಿದ್ದಾರೆ.

ಕಾಮೆಂಟ್‌ಗಳಿಲ್ಲ