Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ - 15ಕ್ಕೂ ಹೆಚ್ಚು ಕಂಪನಿಗಳಿಂದ ಉದ್ಯೋಗ ಭರವಸೆ - ಉತ್ಸಾಹದಿಂದ ಪಾಲ್ಗೊಂಡ ಆಕಾಂಕ್ಷಿಗಳು

ಹೊಸನಗರ : ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಸಹಯೋಗದೊಂದಿಗೆ ಕೆರಿಯರ್ ಅಂಡ್ ಪ್ಲೇಸ್‌ಮೆಂಟ್‌‌ ಸೆಲ್ ವಿಭಾಗದವರು ಇಂದು ಕಾಲೇಜಿನ ಆವರಣದಲ್ಲಿ 15ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಆಸಕ್ತ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು, ವಿದ್ಯಾರ್ಥಿಗಳು ಮೇಳದಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು.

ಕಾಲೇಜಿನ ಮಾನವಿಕ ವಿಭಾಗದ ಸಂಚಾಲಕ ಡಾ. ಕೆ. ಶ್ರೀಪತಿ ಹಳಗುಂದರವರು ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಸಕ್ತ ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಿದ ಕಂಪೆನಿಗಳಲ್ಲಿ ತಮಗಿಷ್ಟವಾದ ಕಂಪೆನಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು, ಉದ್ಯೋಗದಲ್ಲಿ ಆಸಕ್ತಿ ಹಾಗೂ ಶ್ರಮದೊಂದಿಗೆ ಪಾಲ್ಗೊಂಡು ಉನ್ನತ ಸ್ಥಾನ ಹೊಂದಿ ಜೀವನದಲ್ಲಿ ಅರ್ಥಪೂರ್ಣವಾಗಿ ಅಭಿವೃದ್ಧಿ ಹೊಂದಬೇಕೆಂದು ಕರೆ ನೀಡಿದರು.

CLICK ಮಾಡಿ - ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿ ರಕ್ತದಾನ ಶಿಬಿರ - 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ರಕ್ತದಾನ

ಈ ಸಮಾರಂಭದಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್, ಕಾಲೇಜು ಅಭಿವೃದ್ಧಿ ಸಮಿತಿಯ ಇಟಾಚಿ ಶ್ರೀಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಓಂಕೇಶ್, ಸದಸ್ಯ ಮಹೇಂದ್ರ, ನಾಗೇಶ್, ಅಣ್ಣಪ್ಪ ಮೊದಲಾದವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಐಶ್ವರ್ಯ ಸಂಗಡಿಗರು ಪ್ರಾರ್ಥಿಸಿದರು. ಐಕ್ಯೂಎಸಿ ಸಂಚಾಲಕ ಸಿ. ಹೆಚ್. ರವಿ ಸ್ವಾಗತಿಸಿದರು. ಕಾಲೇಜಿನ ಕೆರಿಯರ್ ಅಂಡ್‌ ಪ್ಲೇಸ್‌ಮೆಂಟ್ ಸೆಲ್‌ನ ಸಂಚಾಲಕ ಬಿ. ಮಂಜು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಶ್ರೀಮತಿ ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು. ಪ್ರದೀಪ್ ಕುಮಾರ್ ವಂದಿಸಿದರು.

ಕಾಮೆಂಟ್‌ಗಳಿಲ್ಲ