ಶೃಂಗ ಸಂಭ್ರಮ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹೊಸನಗರ ಕೊಡಚಾದ್ರಿ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಹೊಸನಗರ : ಶೃಂಗೇರಿಯಲ್ಲಿ ನಡೆದ ಶೃಂಗ ಸಂಭ್ರಮ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ತಾಲ್ಲೂಕಿನ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದು, ಚಾಂಪಿಯನ್ ಪಟ್ಟ ಪಡೆದುಕೊಂಡಿದ್ದಾರೆ.
ನಿನ್ನೆ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ನಡೆದ ಶೃಂಗ ಸಂಭ್ರಮ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಸುಮಾರು 20 ಪದವಿ ಕಾಲೇಜುಗಳು ಭಾಗವಹಿಸಿದ್ದವು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಕೊಡಚಾದ್ರಿ ಕಾಲೇಜು ವಿದ್ಯಾರ್ಥಿಗಳಾದ ಕು. ನಿಷ್ಮಿತ ಭಾವಗೀತೆಯಲ್ಲಿ ಪ್ರಥಮ, ಸುಷ್ಮಿತ ಮತ್ತು ತಂಡ ಕೋಲಾಟದಲ್ಲಿ ದ್ವಿತೀಯ, ರಂಜನ್ ಮತ್ತು ತಂಡ ಜಾನಪದ ಗೀತೆಯಲ್ಲಿ ದ್ವಿತೀಯ, ಉಜ್ವಲ ಸಿನಿಮಾ ನೃತ್ಯ ಸೋಲೋ ವಿಭಾಗದಲ್ಲಿ ದ್ವಿತೀಯ, ನಿರೂಪಣೆಯಲ್ಲಿ ರಂಜಿತ ದ್ವಿತೀಯ ಮತ್ತು ರಶ್ಮಿತ ಹಾಗೂ ತಂಡದವರು ಸಿನಿಮಾ ನೃತ್ಯ ವಿಭಾಗದಲ್ಲಿ ದ್ವಿತೀಯ ಬಹುಮಾನ ಪಡೆಯುವ ಮೂಲಕ, ಗಳಿಸಿದ ಒಟ್ಟು ಅಂಕಗಳ ಆಧಾರದಲ್ಲಿ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದು ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕೊಡಚಾದ್ರಿ ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಡಾ. ಕೆ. ಶ್ರೀಪತಿ ಹಳಗುಂದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಚಾಂಪಿಯನ್ ಪಟ್ಟ ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳಿಲ್ಲ