Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ - ಈಜು ಸ್ಪರ್ಧೆಯಲ್ಲಿ ಹೊಸನಗರದ ಸಹ ಶಿಕ್ಷಕಿ ಲತಾ ಭೂಷಣ್‌ ದ್ವಿತೀಯ

ಹೊಸನಗರ : ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ  ಲತಾಭೂಷಣ್ ಅವರು 50 ಮೀ ಹಾಗೂ 100 ಮೀ ದೂರದ ಫ್ರೀ ಸ್ಟೈಲ್ ವಿಭಾಗದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಎರಡೂ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

CLICK ಮಾಡಿ - 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ - ಅರ್ಜಿ ಆಹ್ವಾನ

ಈಜು ಸ್ಪರ್ಧೆಯಲ್ಲಿ ಲತಾ ಭೂಷಣ್‌ ವಿಜೇತರಾದ ಹಿನ್ನೆಲೆಯಲ್ಲಿ ಸಾಗರ ವಿಧಾನಸಭಾ ಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಇಂದು ಶಾಲೆಗೆ ಭೇಟಿ ನೀಡಿ, ಶಿಕ್ಷಕಿಯ ಸಾಧನೆಯನ್ನು ಗೌರವಿಸುವ ಮೂಲಕ ಆತ್ಮೀಯವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಮೇಶ್ ವಸವೆ, ತಹಶೀಲ್ದಾರ್ ರಶ್ಮಿ, ತಾಲ್ಲೂಕು ಪಂಚಾಯಿತಿ ಇಓ ನರೇಂದ್ರ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ