ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಅನುಮತಿ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ಸಿನಿಂದ ಬೃಹತ್ ಪ್ರತಿಭಟನೆ
ಹೊಸನಗರ : ಪಟ್ಟಣದಲ್ಲಿ ಇಂದು ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ನಿಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಖಂಡಿಸಿ ಮಾನವ ಸರಪಳಿ ನಿರ್ಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಕಲಗೋಡು ರತ್ನಾಕರ್, ಜಿಲ್ಲಾ ಮುಖಂಡರಾದ ಬಿ. ಆರ್. ಪ್ರಭಾಕರ್, ಶ್ರೀನಿವಾಸ್ ಕಾಮತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಕಾರ್ಯದರ್ಶಿ ಡಿ. ಎಂ. ಸದಾಶಿವ ಶೆಟ್ಟಿ, ಮಾಜಿ ಅಧ್ಯಕ್ಷ ಬಿ.ಜಿ. ನಾಗರಾಜ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಯಶಸ್ವತಿ ಜೈನ್, ಚಂದ್ರಕಲ ನಾಗರಾಜ್, ಶಾಹಿನಾ ಬೇಗಂ, ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಯ ವಿವಿಧ ಘಟಕಗಳ ಮುಖಂಡರುಗಳು ಹಾಗೂ ಕಾರ್ಯಕರ್ತರು ಉರಿಯುವ ಬಿಸಿಲಿನಲ್ಲೂ ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಸರ್ಕಾರ ಅಲ್ಲಾಡಿಸಲು ಬಿಜೆಪಿ ಹುನ್ನಾರ ನಡೆಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆನ್ನ ಹಿಂದೆ ನಾವೆಲ್ಲರೂ ಟೊಂಕ ಕಟ್ಟಿ ನಿಂತಿದ್ದು ಬಿಜೆಪಿಗಳ ಈ ಹುನ್ನಾರ ಇನ್ನೂ ಮುಂದುವರೆದರೆ ಈ ಹೋರಾಟ ಮುಂದೆ ಗ್ರಾಮಮಟ್ಟದಲ್ಲೂ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ನಂತರ ಪ್ರತಿಭಟನಾಕಾರರು ತಾಲ್ಲೂಕು ಕಚೇರಿಗೆ ತೆರಳಿ ಮನವಿಯನ್ನ ತಾಲ್ಲೂಕು ಆಡಳಿತಕ್ಕೆ ಸಲ್ಲಿಸಿದರು.
ಕಾಮೆಂಟ್‌ಗಳಿಲ್ಲ