Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ - ಬಿಜೆಪಿಗೆ ಮುಖಭಂಗ - ನೂತನ ಅಧ್ಯಕ್ಷ ನಾಗಪ್ಪ (ರೆಡ್ಡಿ), ಉಪಾಧ್ಯಕ್ಷೆಯಾಗಿ ಚಂದ್ರಕಲಾ ಅವಿರೋಧ ಆಯ್ಕೆ

ಹೊಸನಗರ : ಇಲ್ಲಿನ ಪಟ್ಟಣ ಪಂಚಾಯಿತಿ ಎರಡನೇ ಆಡಳಿತ ಅವಧಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ಸಿನ ನಾಗಪ್ಪ(ರೆಡ್ಡಿ) ಹಾಗೂ ಉಪಾಧ್ಯಕ್ಷೆ ಯಾಗಿ ಚಂದ್ರಕಲಾ ನಾಗರಾಜ್‌ ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 11 ಸದಸ್ಯ ಬಲದ ಈ ಪಂಚಾಯಿತಿಯಲ್ಲಿ ತಲಾ ನಾಲ್ಕು ಬಿಜೆಪಿ, ಕಾಂಗ್ರೆಸ್ ಹಾಗೂ ಮೂರು ಬಿಜೆಪಿ ಚುನಾಯಿತ ಸದಸ್ಯರಿದ್ದರು.

ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜೆಡಿಎಸ್ಸಿನ ಚುನಾಯಿತ ಸದಸ್ಯ ಹಾಲಗದ್ದೆ ಉಮೇಶ್, ಬಿಜೆಪಿಯ ಗುರುರಾಜ್ ಹಾಗೂ ಗುಲಾಬಿ ಮರಿಯಪ್ಪ ಗೈರುಹಾಜರಾಗಿದ್ದು ಸಾರ್ವಜನಿಕರಲ್ಲಿ ಕುತೂಹಲ ಸೃಷ್ಟಿಸಿತ್ತು.

ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಈ ಚುನಾವಣಾ ತಂತ್ರ ರೂಪಿಸಿ, ತಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವಂತೆ ನೋಡಿಕೊಂಡಿತು.

ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪರ ಐದು ಸದಸ್ಯರು ಹಾಗೂ ಬಿಜೆಪಿ ಪರ ಮೂರು ಸದಸ್ಯರು ಹಾಜರಿದ್ದರು. ಹಾಲಗದ್ದೆ ಉಮೇಶ್, ಗುಲಾಬಿ ಮರಿಯಪ್ಪ ಹಾಗೂ ಗುರುರಾಜ್ ಗೈರು ಹಾಜರಾಗುವ ಮೂಲಕ  ಚುನಾವಣಾ ಪ್ರಕ್ರಿಯೆಯಿಂದ ದೂರವೇ ಉಳಿದರು. ಈ ಮೂಲಕ ಹೊಸನಗರ ಪಟ್ಟಣ ಪಂಚಾಯಿತಿ ಆಡಳಿತ ಕಾಂಗ್ರೆಸ್ ಪಾಲಾಯಿತು.

CLICK ಮಾಡಿ - ಹುಲಿಕಲ್ ಘಾಟಿ ರಸ್ತೆಯಲ್ಲಿ ಎರಡು ಲಾರಿಗಳ ನಡುವೆ ಅಪಘಾತ - ಬೆಳಿಗ್ಗೆ 5 ರಿಂದ 9ರ ತನಕ ಸಂಚಾರ ಬಂದ್‌‌

ನೂತನ ಅಧ್ಯಕ್ಷ, ಉಪಾಧ್ಯಕ್ಷೆಗೆ ಅಭಿನಂದನೆ ಸಲ್ಲಿಸಿದ ಬಳಿಕ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಭದ್ರ ನೆಲೆ ಕಂಡಿದೆ. ಇತ್ತೀಚಿನ ಡಿಸಿಸಿ ಬ್ಯಾಂಕ್, ಶಿಮೂಲ್ ಹಾಗೂ ಕಾರ್ಗಲ್ ಪಟ್ಟಣ ಪಂಚಾಯತಿ ಚುನಾವಣೆಗಳೇ ಇದಕ್ಕೆ ಸಾಕ್ಷಿ ಎಂದರು. ಹೊಸನಗರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ತಾವು ಈಗಲೂ ಕಟಿಬದ್ಧರಾಗಿದ್ದು ನೂತನ ಆಡಳಿತ ಸಮಿತಿ ಜೊತೆ ಚರ್ಚಿಸಿ ಪಟ್ಟಣ ಪಂಚಾಯತಿಯ ಸುಸಜ್ಜಿತ ನೂತನ ಕಟ್ಟಡ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಯಲ್ಲಿ, ನೂತನ ಆಡಳಿತ ಸಮಿತಿಗೆ ನೈತಿಕ ಬೆಂಬಲ ನೀಡಲು ಸದಾ ಸಿದ್ಧ ಇರುವುದಾಗಿ ತಿಳಿಸಿದರು. 

ಪರಸ್ಪರ ಹೊಂದಾಣಿಕೆ ರಾಜಕಾರಣದಿಂದ ಮಾತ್ರವೇ ಪಕ್ಷ ಸಂಘಟನೆ ಸಾಧ್ಯ ಎಂಬುದನ್ನು ಈ ಗೆಲುವು ಪುಷ್ಟೀಕರಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ತಿಳಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಶಿಮೂಲ್‌ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ್, ಜಿ.ಪಂ.ಮಾಜಿ ಸದಸ್ಯರಾದ ಅನಿತಾ ಕುಮಾರಿ, ಬಂಡಿ ರಾಮಚಂದ್ರ, ಪ.ಪಂ. ಸದಸ್ಯರಾದ ಸಿಂಥಿಯಾ, ಶಾಹಿನಾ, ಅಶ್ವಿನಿ ಕುಮಾರ್, ಗುರುರಾಜ್,  ಪ್ರಮುಖರಾದ ಹರತಾಳು ಸಾಕಮ್ಮ, ನೋರಾ ಮೆಟೆಲ್ಡಾ ಸಿಕ್ವೇರಾ, ರಾಧಿಕಾ ಶೆಟ್ಟಿ, ಗುರುರಾಜ್ ಕೆ.ಎಸ್, ಕಾರ್ಯದರ್ಶಿ ಸದಾಶಿವ, ಕರುಣಾಕರ ಶೆಟ್ಟಿ, ನಾಗೋಡಿ ವಿಶ್ವನಾಥ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಕಳೂರು ಕೃಷ್ಣಮೂರ್ತಿ ಸೇರಿದಂತೆ ಹಲವರು ಇದ್ದರು.

ಕಾಮೆಂಟ್‌ಗಳಿಲ್ಲ