Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನಾ ಇಲಾಖೆಯಿಂದ ಪೋಷಣ್ ಮಾಸಾಚರಣೆ-2024 ಉದ್ಘಾಟನೆ

ಹೊಸನಗರ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ಹೊಸನಗರ ವಲಯದ 3 ಅಂಗನವಾಡಿ ಕೇಂದ್ರದಲ್ಲಿ ತಾಯಿಯ ಹೆಸರಿನಲ್ಲಿ ಗಿಡ ನೆಡುವ ಮೂಲಕ, ಪರಿಸರ ಸಂರಕ್ಷಣೆಯ ಕುರಿತು ಸಂದೇಶ ನೀಡುತ್ತಾ, ’ಸುಪೋಷಿತ ಕಿಶೋರಿ, ಸಶಕ್ತ ನಾರಿ’ ಎಂಬ ಘೋಷ ವಾಕ್ಯದಡಿ ಪೋಷಣ್ ಅಭಿಯಾನ ಯೋಜನೆಯ ಪೋಷಣ್ ಮಾಸಾಚರಣೆ 2024ರ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಈ ಸರಳ ಸಮಾರಂಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿ ಮೇಲ್ವಿಚಾರಕಿ ಶ್ರೀಮತಿ ವನಮಾಲ ರಾಜು ಮೊದಲಾದವರು ಉಪಸ್ಥಿತರಿದ್ದರು.

ಶ್ರೀಮತಿ ದಿವ್ಯ ಮಧು ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.

ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿಯ ಅರವಿಂದ, ಶ್ರೀಮತಿ ದಿವ್ಯ, ಬಂಗಾರಮ್ಮ, ನೇತ್ರಾವತಿ, ಸುಗಂಧ, ಸುಜಾತ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳಿಲ್ಲ