Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಆಗಸ್ಟ್ 21 ರಂದು ಹೊಸನಗರದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ವೈಭವದ ಆರಾಧನಾ ಮಹೋತ್ಸವ

ಹೊಸನಗರ : ಪಟ್ಟಣದ ಹಳೆ ಸಾಗರ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನದಲ್ಲಿ ಶ್ರೀ ಗುರುಗಳ 353ನೇ ಆರಾಧನಾ ಮಹೋತ್ಸವವನ್ನು ಆಗಸ್ಟ್ 21ರ ಬುಧವಾರ ವೈಭವದಿಂದ ನಡೆಸಲು ತೀರ್ಮಾನಿಸಿರುವುದಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸಮಿತಿಯ ಎನ್. ವಿಜೇಂದ್ರ ಶೇಟ್ ತಿಳಿಸಿದ್ದಾರೆ.

21ರ ಬುಧವಾರ ಬೆಳಿಗ್ಗೆ 6 ಗಂಟೆಗೆ ಅಷ್ಟೋತ್ತರ, ಏಳು ಗಂಟೆಗೆ ಪಂಚಾಮೃತ ಅಭಿಷೇಕ, 11 ಗಂಟೆಗೆ ಅಲಂಕಾರ ಸೇವೆ, ಹಸ್ತೋದಕ, 12:30ಕ್ಕೆ ಮಹಾಮಂಗಳಾರತಿ, ಒಂದು ಗಂಟೆಗೆ ಸಾಮೂಹಿಕ ಅನ್ನ ಸಂತರ್ಪಣೆ, ರಾತ್ರಿ 7:30ಕ್ಕೆ ಪಲ್ಲಕ್ಕಿ ಉತ್ಸವ, ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಿಳಿಸಿದರು.

VIDEO - ರಿಪ್ಪನ್‌ಪೇಟೆ ಹಾಸ್ಟೆಲ್ ಮಕ್ಕಳ ಊಟದಲ್ಲಿ ಎಪ್ರತಪ್ರಾ... ವಾರ್ಡನ್‌ ಸಸ್ಪೆಂಡ್‌ ಮಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು

ಈ ಸಂದರ್ಭದಲ್ಲಿ ಭಕ್ತ ಮಹಾಶಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ರಾಯರ ಕೃಪೆಗೆ ಪಾತ್ರರಾಗಬೇಕೆಂದು ಅವರು ಕೋರಿದ್ದಾರೆ.


ಕಾಮೆಂಟ್‌ಗಳಿಲ್ಲ