Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಕೋಡೂರು ಯಳಗಲ್ಲು ಅಂಬೇಡ್ಕರ್ ವಸತಿ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ಚೆಸ್ ಹಾಗೂ ಯೋಗಾಸನ ಸ್ಪರ್ಧೆ

ಹೊಸನಗರ: ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಳಗಲ್ಲು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯಲ್ಲಿ 14 ಹಾಗೂ 17 ವರ್ಷದೊಳಗಿನ ಬಾಲಕ - ಬಾಲಕಿಯರ ತಾಲ್ಲೂಕು ಮಟ್ಟದ ಚೆಸ್ ಹಾಗೂ ಯೋಗಾಸನ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು.

ಶಾಲಾ ಶಿಕ್ಷಣ ಇಲಾಖೆ ಹೊಸನಗರ ಹಾಗೂ ಡಾ. ಬಿ.ಆರ್‌‌. ಅಂಬೇಡ್ಕರ್ ವಸತಿ ಶಾಲೆ, ಯಳಗಲ್ಲು ಹುಂಚ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಸ್ಪರ್ಧೆಯನ್ನು ಕೋಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ್ ಕಲಗೋಡು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧಾಕರ ಗೌಡ, ಸದಸ್ಯ ಜಯಪ್ರಕಾಶ್ ಶೆಟ್ಟಿ, ಪಿಡಿಓ ಎಸ್.ನಾಗರಾಜ್, ಬಿಇಓ ಹೆಚ್.ಆರ್. ಕೃಷ್ಣಮೂರ್ತಿ, ಜಿಲ್ಲಾ ದೈಹಿಕ ಪರಿವೀಕ್ಷಕ ಬಾಲಚಂದ್ರ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

CLICK ಮಾಡಿ - ನಗರ ಭಾಗದಲ್ಲಿ ಸರಣಿ ಕಳ್ಳತನ ಪ್ರಕರಣಗಳಿಂದ ಆತಂಕಗೊಂಡ ಜನರು - ನಿನ್ನೆ ಕದ್ದ ಮಾಲನ್ನು ಇವತ್ತು ಮನೆ ಗೇಟ್‌ ಬಳಿ ಇಟ್ಟು ಹೋದ ಕಳ್ಳರು?!

ತಾಲ್ಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹಲವು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಸತಿ ಶಾಲೆಯ ವ್ಯವಸ್ಥಾಪಕರು ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದು ಎಲ್ಲರ ಗಮನ ಸೆಳೆಯಿತು.

ಕಾಮೆಂಟ್‌ಗಳಿಲ್ಲ