Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಎಚ್ಚರಿಕೆ!! ಅಂಗನವಾಡಿ ಹುದ್ದೆಗಳ ನೇಮಕಾತಿ - ಮಧ್ಯವರ್ತಿಗಳಿಂದ ಮೋಸ ಹೋಗದಿರಿ...

ಹೊಸನಗರ : ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್‌‌ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಈ ಆಯ್ಕೆಯನ್ನು ಅರ್ಹ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು.

VIDEO - ಹೊಸನಗರದ ಹೆದ್ದಾರಿಪುರ ಹಿಂದೂ ಮಹಾಸಭಾ ಗಣಪತಿಯ ಅದ್ಧೂರಿ ವಿಸರ್ಜನಾ ಮೆರವಣಿಗೆ

ಕೆಲವು ಮಧ್ಯವರ್ತಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದು, ಯಾರೂ ಸಹ ಹಣ ನೀಡಿ ಮೋಸ ಹೋಗಬಾರದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಮೆಂಟ್‌ಗಳಿಲ್ಲ