Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರಿಂದ ಸೆಪ್ಟೆಂಬರ್ 19ರಂದು ’ಬೆಂಗಳೂರು ಚಲೋ’

ಹೊಸನಗರ : ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮ್ಮ ಅನುದಿನದ ಬೇಡಿಕೆಗಳಿಗಾಗಿ ಬೆಂಗಳೂರು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಾಲ್ಲೂಕು ಅಧ್ಯಕ್ಷೆ ಶ್ರೀಮತಿ ಸಿ. ಶಶಿಕಲಾ ತಿಳಿಸಿದರು.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ರಾಜ್ಯ ಸಮಿತಿ ಸಂಚಾಲಕ ಎನ್. ರವೀಂದ್ರ ಸಾಗರ ಅಧ್ಯಕ್ಷತೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಅಂಗನವಾಡಿಗಳನ್ನು ಉಳಿಸಿ, ಅಂಗನವಾಡಿಗಳನ್ನು ಬಲಪಡಿಸಬೇಕೆಂಬ ಘೋಷಣೆಯಡಿ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಸರ್ಕಾರ ಅಧಿಕೃತ ತೀರ್ಮಾನ ಕೈಗೊಂಡಿದ್ದು ಸರ್ಕಾರ ಇದಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡುವುದು ಹಾಗೂ ಎಲ್ಲಾ ಅಂಗನವಾಡಿ ನೌಕರರಿಗೆ ಗ್ರಾಚ್ಯುಟಿ ನೀಡಬೇಕು ಹಾಗೂ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಹೆಚ್ಚಿಸಬೇಕು. ಇದರೊಂದಿಗೆ ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಪೌಷ್ಠಿಕ ಆಹಾರ ಸರಬರಾಜು ಮಾಡಬೇಕೆನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಇದೇ ಸೆಪ್ಟೆಂಬರ್ 19 ರಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ಅವರು ತಿಳಿಸಿದರು.

CLICK ಮಾಡಿ - ನಾಲ್ಕು ವರ್ಷಗಳ ನಂತರ ಹೊಸನಗರದಲ್ಲಿ ಪುನರಾರಂಭಗೊಂಡ ಪ್ರಧಾನಮಂತ್ರಿ ಜನೌಷಧಿ ಕೇಂದ್ರ

ಆರು ವರ್ಷದೊಳಗಿನ ಮಕ್ಕಳು. ಬಾಣಂತಿಯರು, ಗರ್ಭಿಣಿಯರಲ್ಲಿ ಅಪೌಷ್ಟಿಕತೆ, ರಕ್ತ ಹೀನತೆ ನಿವಾರಣೆ ಸಾಧ್ಯವಾಗಿದೆ ಮತ್ತು ಮಕ್ಕಳ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಪೂರಕವಾಗಿ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಇಂತಹ ಮಾತೃ ಯೋಜನೆಯನ್ನು ಮತ್ತಷ್ಟು ಬಲಗೊಳಿಸಿ ಅಂಗನವಾಡಿ ವ್ಯವಸ್ಥೆಯನ್ನು ಉಳಿಸಿ ಬೆಳೆಸಬೇಕಾದ ಅನಿವಾರ್ಯತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಅಂಗನವಾಡಿ ಸಂಘಟನೆಗಳು ಸರ್ಕಾರದ ಗಮನ ಸೆಳೆಯಲು ರಾಜ್ಯಾದ್ಯಂತದ ಕಾರ್ಯಕರ್ತೆಯರು ಹೋರಾಟಕ್ಕೆ ಸನ್ನದ್ಧರಾಗಿದ್ದಾರೆ ಎಂದು ತಿಳಿಸಿದ ಅವರು, ನಮ್ಮ ಮೂಲಭೂತ ಬೇಡಿಕೆಗಳಾದ ಗ್ರಾಚ್ಯುಟಿ ಸೌಲಭ್ಯ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಮಾಸಿಕ 15 ಸಾವಿರ ರೂ ಹಾಗೂ ಸಹಾಯಕಿಯರಿಗೆ 10 ಸಾವಿರ ರೂ ಗೌರವಧನ ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.

CLICK ಮಾಡಿ - 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ - ಅರ್ಜಿ ಆಹ್ವಾನ

ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೌಷ್ಠಿಕ ಆಹಾರಗಳು ತೀರಾ ಕಳಪೆ ಗುಣಮಟ್ಟದಿಂದ ಕೂಡಿದ್ದಾಗಿದ್ದು ಈ ಬಗ್ಗೆ ಅಂಗನವಾಡಿ ಕೇಂದ್ರಗಳಿಂದ ವ್ಯಾಪಕ ದೂರುಗಳು ಬಂದಿವೆ. ಗುಣಮಟ್ಟದ ಪೌಷ್ಠಿಕ ಆಹಾರ ನೀಡಬೇಕು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಆಯ್ಕೆ ಸಂದರ್ಭ ಈಗಿರುವ ವಯೋಮಿತಿಯನ್ನು ಸಡಿಲಿಸಿ, ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 38 ವರ್ಷಗಳ ನಿಗದಿ ಮಾಡಬೇಕೆಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಯಮ್ಮ, ಪ್ರಧಾನ ಕಾರ್ಯದರ್ಶಿ ಲೀಲಾವತಿ, ಕಾರ್ಯದರ್ಶಿ ಗೀತಾ, ಖಜಾಂಚಿ ಉಮಾ, ಸತ್ಯ, ನಾಗರತ್ನ, ಸುಜಾತ, ಗಾಯತ್ರಿ, ವೀಣಾ ಸೇರಿದಂತೆ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ