Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಕಾಲ ಹತ್ತಿರವಾಗುತ್ತಿದೆ - ಹೊಸನಗರದಲ್ಲಿಂದು ಭವಿಷ್ಯ ನುಡಿದ ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ. ವಿಜಯೇಂದ್ರ ಬಗ್ಗೆ ಇಂದಿಗೂ ಅವರದ್ದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರೂ ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ ಹುನ್ನಾರ ಬಿಜೆಪಿಯಲ್ಲಿ ನಿರಂತರವಾಗಿ ನಡೆದೇ ಇದೆ. ತಮ್ಮಲ್ಲಿಯೇ ಓರ್ವ ಸಮರ್ಥ ನಾಯಕನನ್ನು ಅಧ್ಯಕ್ಷನನ್ನಾಗಿ ಮಾಡುವ ಒಳ ಒಪ್ಪಂದ ಪಕ್ಷದ ಅತೃಪ್ತ ಬಣದ್ದಾಗಿದೆ ಎಂದು ರಾಜ್ಯ ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ, ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದರು. 

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಬೇಳೂರು, ಶಾಸಕ ವಿಜಯೇಂದ್ರ ಓರ್ವ ಭ್ರಷ್ಟ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್ ವ್ಯಕ್ತಿ ಎಂಬ ಶಾಸಕ ಯತ್ನಾಳ್ ಅವರ ಇತ್ತೀಚಿನ ಹೇಳಿಕೆ ಇದನ್ನು ಪುಷ್ಟೀಕರಿಸುತ್ತದೆ. ಹಾಗಾಗಿ ಅವರ ವಿರೋಧಿ ಪಡೆಗಳು ಅಲ್ಲಲ್ಲಿ ಗುಪ್ತ ಸಭೆಗಳನ್ನು ನಡೆಸಿ, ಮಾಜಿ ಉಪ ಮುಖ್ಯಮಂತ್ರಿ, ಹಿಂದುತ್ವವಾದಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಬೇಕು. ಪಕ್ಷ ಕಟ್ಟಿ ಬೆಳೆಸಿದ ಈಶ್ವರಪ್ಪ ಅವರಂತಹ ಹಿರಿಯ ನಾಯಕನನ್ನು ಏಕಾಏಕಿ ಪಕ್ಷದಿಂದ ಉಚ್ಚಾಟಿಸಿದ್ದು ಅಕ್ಷಮ್ಯ ಎಂಬ ನಿಲುವು ಹೊಂದಿದ್ದು, ಇದು ಬಿಜೆಪಿಯೊಳಗಿನ ಅತೃಪ್ತರು ಅಧ್ಯಕ್ಷ ವಿಜಯೇಂದ್ರ ವಿರುದ್ಧ ಕಿಡಿಕಾರಲು ಕಾರಣವಾಗಿದೆ. ಮುಂಬರುವ ದಿನಗಳಲ್ಲಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಈ ಸಂಗತಿ ನುಂಗಲಾರದ ತುತ್ತಾಗಿ ಪರಿಣಮಿಸಲೂಬಹುದು ಎಂಬಂತೆ ಕಂಡು ಬರುತ್ತಿದೆ ಎಂಬುದಾಗಿ ಅವರು ಭವಿಷ್ಯ ನುಡಿದರು.

CLICK ಮಾಡಿ -ಹರಿದ್ರಾವತಿಯಲ್ಲಿ ಸಡಗರ ಸಂಭ್ರಮದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ರಾಜ್ಯ ಸರ್ಕಾರ ದೇವಸ್ಥಾನಗಳ ಅಭಿವೃದ್ಧಿಗಾಗಿ ರೂ 25 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ಕ್ಷೇತ್ರದ ಸಾಗರ-ಹೊಸನಗರ ತಾಲ್ಲೂಕುಗಳ ಸುಮಾರು 97 ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳಿಗೆ 4 ಕೋಟಿ ಅನುದಾನ ಬಿಡುಗಡೆ ಆಗಿದೆ. ದೇವಾಲಯಗಳ ಅಗತ್ಯಕ್ಕೆ ಅನುಸಾರವಾಗಿ ಹಣ ನೀಡಿದ್ದು, ಭಕ್ತಾದಿಗಳ ನಿರೀಕ್ಷೆಯನ್ನು ಪೂರೈಸಿದ ಸಂತೃಪ್ತಿ ತಮಗಿದೆ ಎಂದರು.


ಕಾಮೆಂಟ್‌ಗಳಿಲ್ಲ